ದುರ್ಬಲಗೊಂಡ ಮುಂಗಾರು, ಕಡಿಮೆಯಾಯ್ತು ಮಳೆ ಅಬ್ಬರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.28- ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದರೆ, ಒಳನಾಡಿನಲ್ಲಿ ಚದುರಿದಂತೆ ಕೆಲವೆಡೆ ಮಳೆಯಾಗಿದೆ. ಹವಾ ಮುನ್ಸೂಚನೆ ಪ್ರಕಾರ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು , ಒಳನಾಡಿನ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

ಆ.1ರವರೆಗೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳ ನಾಡಿನ ಕೆಲವೆಡೆ ಮಾತ್ರ ಹಗುರ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶ ಇರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆ ಮುಂದುವರೆಯಲಿದೆ. ಆದರೆ ಒಳನಾಡಿನಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಮುಂದುವರೆಯಲಿದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು , ಇನ್ನು ಎರಡು ದಿನಗಳ ಕಾಲ ಹಗುರ ಮಳೆ ನಿರೀಕ್ಷಿಸಬಹುದು ಎಂದು ಅವರು ಹೇಳಿದ್ದಾರೆ.

Facebook Comments