ಈ ಬಾರಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.1-ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆ ಕಳೆದ ಎರಡು ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಾಗಿದೆ. ಕಳೆದ ಜೂ.1ರಿಂದ ಜು.31ರವರೆಗಿನ ಅವಯಲ್ಲಿ ರಾಜ್ಯದಲ್ಲಿ ವಾಡಿಕೆ ಮಳೆ ಪ್ರಮಾಣ 480 ಮಿ.ಮೀ ಆಗಿದ್ದು, 488 ಮಿ.ಮೀ ಆಗಿದ್ದು ವಾಡಿಕೆಗಿಂತ ಶೇ.2ರಷ್ಟು ಹೆಚ್ಚು ಮಳೆಯಾದ ವರದಿಯಾಗಿದೆ.

ಆದರೆ ಅತಿಹೆಚ್ಚು ಮಳೆಯಾಗುವ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಇತ್ತೀಚೆಗೆ ಈ ಭಾಗದಲ್ಲಿ ಭಾರೀ ಮಳೆಯಾಗಿ ಅತಿವೃಷ್ಟಿ, ಪ್ರವಾಹ, ಭೂಕುಸಿತ ಕೂಡ ಉಂಟಾಗಿತ್ತು.ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.48ರಷ್ಟು ಹಾಗೂ ಉತ್ತರ ಒಳನಾಡಿನಲ್ಲಿ ಶೇ.29ರಷ್ಟು ಹೆಚ್ಚು ಮಳೆಯಾಗಿದೆ.

ಆದರೆ ಅತಿಹೆಚ್ಚು ಮಳೆಯಾಗುವ ಕರಾವಳಿ ಮತ್ತು ಮಲೆನಾಡಿನಲ್ಲಿ ವಾಡಿಕೆಗಿಂತ ಶೇ.13ರಷ್ಟು ಕಡಿಮೆ ಮಳೆಯಾಗಿದೆ. ಕರಾವಳಿಯಲ್ಲಿ 2008 ಮಿ.ಮೀ ವಾಡಿಕೆ ಮಳೆಯಾಗಿದ್ದು, 1738 ಮಿ.ಮೀನಷ್ಟು ಮಳೆಯಾಗಿದೆ.ಮಲೆನಾಡಿನಲ್ಲಿ 973 ಮಿ.ಮೀ ವಾಡಿಕೆ ಮಳೆಯಾಗಿದ್ದು, 849 ಮಿ.ಮೀನಷ್ಟು ಮಾತ್ರ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ 147 ಮಿ.ಮೀ ವಾಡಿಕೆ ಮಳೆಯಾಗಿದ್ದು, 217 ಮಿ.ಮೀ.,ನಷ್ಟು ಮಳೆಯಾಗಿದೆ.

ಅದೇರಿ ರೀತಿ ಉತ್ತರ ಒಳನಾಡಿನಲ್ಲಿ 224 ಮಿ.ಮೀ ವಾಡಿಕೆ ಮಳೆಯಾಗಿದ್ದು, 293 ಮಿ.ಮೀನಷ್ಟು ಮಳೆಯಾದ ವರದಿಯಾಗಿದೆ.
ಜುಲೈ ತಿಂಗಳಿನಲ್ಲಿ ರಾಜ್ಯದ ವಾಡಿಕೆ ಮಳೆ ಪ್ರಮಾಣ 280 ಮಿ.ಮೀ ಆಗಿದ್ದು, 290 ಮಿ.ಮೀನಷ್ಟು ಮಳೆಯಾಗಿದ್ದು, ಶೇ.4ರಷ್ಟು ಅಕ ಮಳೆಯಾಗಿದೆ.

ಕರಾವಳಿಯಲ್ಲಿ ಶೇ.15, ಮಲೆನಾಡಿನಲ್ಲಿ ಶೇ.10ರಷ್ಟು ಮಳೆ ಕೊರತೆ ಕಂಡುಬಂದಿದೆ. ಆದರೆ ಉತ್ತರ ಒಳನಾಡಿನಲ್ಲಿ ಶೇ32ರಷ್ಟು ಹಾಗೂ ದಕ್ಷಿಣ ಒಳನಾಡಿನಲ್ಲಿ ಶೇ.72ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.ಜನವರಿ 1ರಿಂದ ಜುಲೈ ಅಂತ್ಯದವರೆಗೆ ಬಿದ್ದ ಮಳೆ ಪ್ರಮಾಣ ವಾಡಿಕೆಗಿಂತ ಶೇ.16ರಷ್ಟು ಹೆಚ್ಚಾಗಿದೆ. ಈ ಅವಯಲ್ಲಿ 599 ಮಿ.ಮೀ ವಾಡಿಕೆ ಮಳೆಯಾಗಿದ್ದು, 695 ಮಿ.ಮೀನಷ್ಟು ಮಳೆಯಾಗಿದೆ.

ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಆದರೆ ಕಳೆದ ಒಂದು ವಾರದಲ್ಲಿ ಮುಂಗಾರು ಕ್ಷೀಣಿಸಿದ್ದು, ರಾಜ್ಯದಲ್ಲಿ ಶೇ.49ರಷ್ಟು ಮಳೆ ಕೊರತೆ ಕಂಡುಬಂದಿದೆ.

ಜುಲೈ ಕೊನೆ ವಾರದಲ್ಲಿ ವಾಡಿಕೆ ಮಳೆ ಪ್ರಮಾಣ 61 ಮಿ.ಮೀ ಆಗಿದ್ದು, ಕೇವಲ 31 ಮಿ.ಮೀನಷ್ಟು ಮಳೆ ಬಿದ್ದಿದೆ. ಈ ವಾರದಲ್ಲಿ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.52, ಉತ್ತರ ಒಳನಾಡಿನಲ್ಲಿ ಶೇ.76, ಮಲೆನಾಡಿನಲ್ಲಿ ಶೇ.38 ಹಾಗೂ ಕರಾವಳಿಯಲ್ಲಿ ಶೇ.40ರಷ್ಟು ಮಳೆ ಕೊರತೆ ಕಂಡುಬಂದಿದೆ.

ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳ ಒಳಹರಿವು ಗಣನೀಯವಾಗಿ ಏರಿಕೆಯಾಗಿದೆ.ಜಲಾಶಯಗಳ ನೀರಿನ ಮಟ್ಟವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬಹುತೇಕ ಜಲಾಶಯಗಳು ಗರಿಷ್ಠ ಮಟ್ಟದ ನೀರು ತುಂಬುವ ಹಂತ ತಲುಪಿವೆ.

ಇದರಿಂದ ಕುಡಿಯುವ ನೀರು ಹಾಗೂ ಕೃಷಿ ಕ್ಷೇತ್ರದ ನೀರಿನ ಸಮಸ್ಯೆ ಬಗೆಹರಿದಂತಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಚದುರಿದಂತೆ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ.

ಆಗಸ್ಟ್ 2ನೇ ವಾರದಲ್ಲಿ ಮತ್ತೆ ಚೇತರಿಕೆ ಕಂಡು ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

Facebook Comments

Sri Raghav

Admin