ಅಧಿವೇಶನ ಹಿನ್ನೆಲೆಯಲ್ಲಿ ಸೆ.21ರಿಂದ 30ರವರೆಗೆ ವಿಧಾನಸೌಧ ಸುತ್ತ ನಿಷೇಧಾಜ್ಞೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.19- ವಿಧಾನಸೌಧದಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್ ಅಧಿವೇಶನಗಳು ಸೆ.21ರಿಂದ 30ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಆ ದಿನಗಳಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ವಿಧಾನಸೌಧ ಕಟ್ಟಡದ ಸುತ್ತಲೂ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.

ನಿಬಂಧನೆಗಳಿಗೆ ಒಳಪಡುವಂತೆ ನಿಷೇಧಾಜ್ಞೆ ಜಾರಿಯಾಗಲಿದ್ದು, ಐದಕ್ಕಿಂತ ಹೆಚ್ಚು ಜನರ ಗುಂಪು ಮೀರಬಾರದು, ಮೆರವಣಿಗೆ ಮತ್ತು ಸಭೆ ನಡೆಸುವಂತಿಲ್ಲ.

ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ.

ಅಧಿವೇಶನದ ಕಲಾಪಗಳು ಸುಗಮವಾಗಿ ನಡೆಯುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಅಧಿವೇಶನ ನಡೆಯುವ ದಿನಗಳಂದು ನಿಷೇಧಾಜ್ಞೆ ಜಾರಿಗಳಿಸಿ ಬೆಂಗಳೂರು ನಗರ ಪೆÇಲೀಸ್ ಆಯುಕ್ತ ಕಮಲ್ ಪಂಥ್ ಆದೇಶ ಹೊರಡಿಸಿದ್ದಾರೆ.

Facebook Comments