ಕುಸ್ತಿಪಟು ಸುಶೀಲ್‍ಕುಮಾರ್ ಮತ್ತೊಬ್ಬ ಸಹಚರನ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜೂ.11-ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರ ಮತ್ತೊಬ್ಬ ಸಹಚರನನ್ನು ಬಂಧಿಸುವಲ್ಲಿ ದೆಹಲಿ ಕ್ರೈಂ ಬ್ರಾಂಚ್ ಪೊಲೀಸರು ಯಶಸ್ವಿಯಾಗಿದ್ದಾರೆ.ಸುಶೀಲ್‍ಕುಮಾರ್ ಹಾಗೂ ಆತನ ಸ್ನೇಹಿತರು ಚತ್ರಸಾಲ್ ಕ್ರೀಡಾಂಗಣದಲ್ಲಿ ಕುಸ್ತಿ ಪಟು ಒಬ್ಬರನ್ನು ಕೊಲೆ ಮಾಡಿದ ಆರೋಪಕ್ಕೆ ಗುರಿಯಾಗಿದ್ದಾರೆ.

ಈ ಪ್ರಕರಣದಲ್ಲಿ ಶಾಮಿಲ್ಲಾಗಿದ್ದ ಎನ್ನಲಾದ ಸುಶೀಲ್ ಕುಮಾರ್ ಸಹಚರ ಅನಿರುದ್ಧ್ ಎಂಬುವರನ್ನು ಬಂಧಿಸಿದೆ ಎಂದು ತಿಳಿದುಬಂದಿದೆ. ಸುಶೀಲ್ ಕುಮಾರ್ ಹಾಗೂ ಆತನ ಸಹಚರರು ಭೂ ವಿವಾದಕ್ಕೆ ಸಂಬಂಧಿಸಿದಂತೆ ಸಾಗರ್ ಧಾನ್ಕರ್ ಮತ್ತು ಆತನ ಇಬ್ಬರು ಸ್ನೇಹಿತರ ಮೇಲೆ ಚತ್ರಸಾಲ್ ಕ್ರೀಡಾಂಗಣದಲ್ಲಿ ಮಾರಣಾಂತಿಕ ದಾಳಿ ನಡೆಸಿದ್ದರು.

ಹಲ್ಲೆ ನಂತರ ಧಾನ್ಕರ್ ಸಾವನ್ನಪ್ಪಿದ್ದರೆ ಆತನ ಇಬ್ಬರು ಸ್ನೇಹಿತರು ತೀವ್ರವಾಗಿ ಗಾಯಗೊಂಡಿದ್ದರು.ಈ ಘಟನೆ ನಂತರ ತನಿಖೆ ಮುಂದುವರೆಸಿದ ಪೊಲೀಸರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಬಂಧಿಸಿ ವಿಚಾರಣೆ ತೀವ್ರಗೊಳಿಸಿತ್ತು.

ಇದೀಗ ಅನಿರುದ್ಧ್ ಎಂಬುವರನ್ನು ಬಂಧಿಸಿದೆ. ಇದರೊಂದಿಗೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

Facebook Comments

Sri Raghav

Admin