ಅವಶ್ಯಕತೆಯಿರುವ ಕಡೆ ಹೆಚ್ಚಿನ ಕೋವಿಡ್ ಪರೀಕ್ಷೆ ನಡೆಸಲು ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ರಾಮನಗರ, ಆ.11- ಜಿಲ್ಲೆಗೆ ನಿಗದಿಯಾಗಿರುವ ಗುರಿಗೆ ಮಾತ್ರ ಕೋವಿಡ್ ಪರೀಕ್ಷೆಗೆ ಸೀಮಿತಗೊಳಿಸದೆ ಅವಶ್ಯಕತೆ ಇರುವ ಕಡೆ ಹೆಚ್ಚಿನ ಕೋವಿಡ್-19 ಪರೀಕ್ಷೆ ನಡೆಸುವಂತೆ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣï ಸೂಚಿಸಿದ್ದಾರೆ.

ಅಕಾರಿಗಳೊಂದಿಗೆ ವೀಡಿಯೋ ಕಾನರೆನ್ಸ್ ಮೂಲಕ ಮಾತನಾಡಿ, ಜಿಲ್ಲೆಯಲ್ಲಿ ಐ.ಎಲï.ಐ ಹಾಗೂ ಎಸ್.ಎ.ಆರ್.ಐ ಪ್ರಕರಣಗಳನ್ನು ಪರೀಕ್ಷೆಗೆ ಒಳಪಡಿಸಿ.

ಜಿಲ್ಲೆಯಲ್ಲಿ ಮಧುಮೇಹ, ರಕ್ತದ ಒತ್ತಡ ಸೇರಿದಂತೆ ಇತರೆ ಕಾಯಿಲೆಯಿಂದ ಬಳಲುತ್ತಿರುವವರ ಬಗ್ಗೆ ಹೆಚ್ಚಿನ ನಿಗಾವಹಿಸಿ ಪ್ರಾಥಮಿಕ ಹಂತದಲ್ಲೇ ಕೋವಿಡ್ ಕಾಯಿಲೆಯನ್ನು ಪತ್ತೆ ಹಚ್ಚಿ ಚಿಕಿತ್ಸೆಗೆ ಒಳಪಡಿಸಿ ಎಂದರು.

ಕೋವಿಡ್ ಸಂಬಂಸಿದಂತೆ ಸಾರ್ವಜನಿಕರು ಸಂಪರ್ಕಿಸಲು ತೆರೆಯಲಾಗಿರುವ ಸಹಾಯವಾಣಿಯ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು ಎಂದು ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಕಾರಿ ಇಕ್ರಂ ಗ್ರಾಮೀಣ ಭಾಗದಲ್ಲಿ ಆಶಾಕಾರ್ಯಕರ್ತೆಯರು ಹಾಗೂ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಾರ್ವಜನಿಕರು ಹೆಚ್ಚು ಸಂಪರ್ಕಿಸುತ್ತಾರೆ ಎಂಬ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಲ್ಲಿ ನರ್ಸ್‍ಗಳ ಕೊರತೆ ಇದ್ದರೆ, ಬೇರೆ ಸ್ಥಳದಿಂದ 15 ನರ್ಸ್‍ಗಳ ವ್ಯವಸ್ಥೆ ಮಾಡಲಾಗುವುದು. ಅವರಿಗೆ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಆರೋಗ್ಯ ಇಲಾಖೆಯಿಂದ ಕಲ್ಪಿಸಿಕೊಡಬೇಕು ಎಂದರು.

ಜಿಲ್ಲಾ ಆರೋಗ್ಯಾಕಾರಿ ಡಾ.ನಿರಂಜನ್ ಅವರು ಮಾತನಾಡಿ, ಜಿಲ್ಲೆಯಲ್ಲಿ 19840 ಸ್ಯಾಂಪಲ್‍ಗಳ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ 1670 ಪಾಸಿಟಿವ್ ಕಂಡುಬಂದಿರುತ್ತದೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಕೋವಿಡ್ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಜಿಲ್ಲೆಗೆ ಆರು ಸಾವಿರ ಆ್ಯಂಟಿಜೆನ್ ಕಿಟ್ ನೀಡಲಾಗಿದ್ದು, 5462 ಬಳಸಿಕೊಳ್ಳಲಾಗಿದೆ ಇದರಲ್ಲಿ 469ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ ಎಂದರು.

ಜಿಲ್ಲೆಯಲ್ಲಿರುವ 122 ಗ್ರಾಮ ಪಂಚಾಯಿತಿಗಳಿಂದ ಆ.10ರ ಅಂತ್ಯಕ್ಕೆ ದಾಖಲೆಯಾದ 40ಲಕ್ಷ ಮಾನವ ದಿನಗಳನ್ನು ನರೇಗಾ ಯೋಜನೆಯಡಿ ಸೃಜಿಸಲಾಗಿದೆ. ವಾರ್ಷಿಕವಾಗಿ ನೀಡಲಾಗಿರುವ 50 ಲಕ್ಷ ಮಾನವ ದಿನಗಳ ಗುರಿಯ ಪೈಕಿ ಈಗಾಗಲೇ 21 ಲಕ್ಷ ಮಾನವ ದಿನಗಳಿಗಿಂತ ಅಕ ಸಾಧನೆಯನ್ನು ಜಿಲ್ಲಾಯಲ್ಲಿ ಮಾಡಲಾಗಿದೆ.

ಒಟ್ಟಾರೆಯಾಗಿ ಶೇ. 173 ಸಾಧನೆ ಮಾಡುವ ಮೂಲಕ ಜಿಲ್ಲೆಯ ಜನತೆಗೆ ಕರೋನಾದಿಂದ ಉದ್ಯೋಗ ಸಿಗದಿದ್ದವರಿಗೆ ಜಿಲ್ಲಾ ಪಂಚಾಯಿತಿ ನೆರವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ ಅವರು ಉಪಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 1400ಕ್ಕೂ ಹೆಚ್ಚು ಪ್ರಾಥಮಿಕ, ಪ್ರೌಢ ಮತ್ತು ಹೈಸ್ಕೂಲïಗಳಿವೆ. ಈ ಪೈಕಿ ಆಯ್ದ 500 ಶಾಲೆಗಳನ್ನು ಗುರುತಿಸಿ ಅಲ್ಲಿ ಆಟದ ಮೈದಾನವನ್ನು ನಿರ್ಮಿಸಲಾಗುತ್ತಿದೆ. ಸುಮಾರು ಒಂದು ಎಕರೆಯಷ್ಟು ಕನಿಷ್ಠ ಜÁಗವನ್ನು ಹೊಂದಿರುವ ಶಾಲೆಗಳಲ್ಲಿ ಮಕ್ಕಳಿಗೆ ಆಟದ ಮೈದಾನವನ್ನು ನಿರ್ಮಿಸಲಾಗುತ್ತಿದೆ.

ಇಲ್ಲಿ, ಓಟದ ಟ್ರ್ಯಾಕ್, ಕಬ್ಬಡಿ, ವಾಲಿಬಾಲï ಮತ್ತು ಬಾಸ್ಕೆಟï ಬಾಲï ಕೋರ್ಟ್, ಹೈಜಂಪ್ ಮತ್ತು ಲಾಂಗ್ ಜಂಪ್‍ಗೆ ಅನುಕೂಲವಾಗುವಂತೆ ಮರಳು ಗುಂಡಿಗಳ ನಿರ್ಮಾಣ ಸೇರಿದಂತೆ ಐದು ಇಲ್ಲವೆ ಆರು ಬಗೆಯ ಆಟಗಳನ್ನು ಮಕ್ಕಳು ಆಡಲು ಅನುವಾಗುವಂತೆ ಮೈದಾನವನ್ನು ನಿರ್ಮಿಸಲಾಗುವುದು ಎಂದು ಸಿಇಒ ಇಕ್ರಂ ಉಪಮುಖ್ಯಮಂತ್ರಿಗಳಿಗೆ ವಿವರಿಸಿದರು.

ಎಸ್.ಎಸ್.ಎಲï.ಸಿ ಪರೀಕ್ಷಾ ಫಲಿತಾಂಶದಲ್ಲಿ ನೂತನವಾಗಿ ರೂಪಿಸಿರುವ ಜಿಲ್ಲಾವಾರು ಶ್ರೇಯಾಂಕ ವ್ಯವಸ್ಥೆಯಲ್ಲಿ ರಾಮನಗರ ಜಿಲ್ಲಾ ಎ ಗ್ರೇಡ್ ಸಾಧನೆ ಮಾಡಿದೆ. ಇದಕ್ಕಾಗಿ ಜಿಲ್ಲೆಗೆ ಹೆಸರು ತಂದುಕೊಟ್ಟ ವಿದ್ಯಾರ್ಥಿಗಳು, ಅಕಾರಿಗಳು ಮತ್ತು ಶಿಕ್ಷಕರನ್ನು ಅಶ್ವತ್ಥ ನಾರಾಯಣ ಅವರು ಅಭಿನಂದಿಸಿದರು.

ರಾಮನಗರದಲ್ಲಿರುವ ಕೋವಿಡ್-19 ಆಸ್ಪತ್ರೆಯು ಬಹುತೇಕ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕುಗಳಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನೆರವಿನಿಂದ ಪ್ರತಿ ತಾಲ್ಲೂಕಿನಲ್ಲೂ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸಲಾಗುತ್ತಿದೆ.

ಮೊದಲ ಹಂತದಲ್ಲಿ ದೊಡ್ಡ ಮರಳವಾಡಿಯಲ್ಲಿ 118 ಹಾಸಿಗೆಗಳ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ. ಇನ್ನು ಮುಂದೆ ಈ ಭಾಗದಲ್ಲಿನ ಕೋವಿಡ್ ಸೋಂಕಿತರಿಗೆ ಇಲ್ಲೇ ಚಿಕಿತ್ಸೆ ನೀಡಲಾಗುವುದು.

ಅದೇ ರೀತಿ ಮಾಗಡಿಯಲ್ಲೂ 100 ಹಾಸಿಗೆ ಸಾಮಥ್ರ್ಯದ ಕೋವಿಡ್ ಕೇರ್ ಸೆಂಟರ್‍ಅನ್ನು ಇನ್ನೆರಡು ದಿನಗಳಲ್ಲಿ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಉಪ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಅನೂಪ್ ಶೆಟ್ಟಿ ಸೇರಿದಂತೆ ಇನ್ನಿತರ ಅಕಾರಿಗಳು ಉಪಸ್ಥಿತರಿದ್ದರು.

Facebook Comments

Sri Raghav

Admin