ತಾಯಿ-ಮಗನ ಬರ್ಬರ ಹತ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ, ಅ.11- ದುಷ್ರ್ಕಮಿಗಳು ತಾಯಿ ಮಗನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದ್ದು, ಜನತೆ ಬೆಚ್ಚಿ ಬಿದ್ದಿದ್ದಾರೆ.

ಸಾಗರ ತಾಲೂಕಿನ ಕಸೆಕಸೆ ಗೂಡ್ಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಂಗಾರಮ್ಮ ಮತ್ತು ಆಕೆಯ ಪುತ್ರ ಪ್ರವೀಣ್‍ನನ್ನು ಹತ್ಯೆ ಮಾಡಲಾಗಿದೆ.ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದೆಂದು ಶಂಕಿಸಲಾಗಿದೆ.

ಬೆಳಗ್ಗೆ ಮನೆಯ ಬಾಗಿಲು ತೆರೆಯದ ಕಾರಣ ಸ್ಥಳೀಯರು ಬಂದು ನುಡಿದಾಗ ತಾಯಿ ಮಗ ಕೊಲೆಯಾಗಿರುವುದು ಗೊತ್ತಾಗಿದೆ. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಮಧ್ಯ ರಾತ್ರಿ ದುಷ್ರ್ಕಮಿಗಳು ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಶ್ವಾನದಳ ಬೆರಳಚ್ಚು ತಜ್ಞರೊಂದಿಗೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin