ಕಾಲುವೆಗೆ ಹಾರಿ ತಾಯಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಬಳ್ಳಾರಿ, ಆ.23- ಕಾಲುವೆಗೆ ಹಾರಿ ತಾಯಿ-ಮಕ್ಕಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆ ಸಂಡೂರು ನಿವಾಸಿಗಳಾದ ಪಾರ್ವತಿ (37), ಶ್ರೇಯಾ (16) ಮತ್ತು ಮಾನಸ (13) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಗಳು.

ಕಳೆದ ಮೂರು ದಿನಗಳ ಹಿಂದೆ ಈ ಮೂವರು ಮನೆಯಿಂದ ನಾಪತ್ತೆಯಾಗಿದ್ದರು. ಕುಟುಂಬಸ್ಥರು, ಸಂಬಂಧಿಕರು ಎಲ್ಲ ಕಡೆ ಹುಡುಕಾಡಿದರೂ ಇವರು ಪತ್ತೆಯಾಗಿರಲಿಲ್ಲ. ಇದೀಗ ಈ ಮೂವರ ಶವಗಳು ಕಾಲುವೆಯಲ್ಲಿ ಪತ್ತೆಯಾಗಿವೆ. ಕೌಟುಂಬಿಕ ಕಲಹದಿಂದ ತಾಯಿ-ಮಕ್ಕಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕಾಗಮಿಸಿದ ಪೊಲೀಸರು ಮೂವರ ಶವಗಳನ್ನು ಕಾಲುವೆಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook Comments