ಸೀಮೆಎಣ್ಣೆ ಸುರಿದು ಮಕ್ಕಳಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರಗಿ, ಅ.26- ತನ್ನಿಬ್ಬರು ಮಕ್ಕಳಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಇಲ್ಲಿನ ಪಂಚಶೀಲ ನಗರದಲ್ಲಿ ನಡೆದಿದೆ. ತಾಯಿ ದೀಕ್ಷಾ (27), ಪುತ್ರಿ ಸಿಂಚನಾ (2) ಸ್ಥಳದಲ್ಲೇ ಸಾವನ್ನಪ್ಪಿದರೆ ನಾಲ್ಕು ವರ್ಷದ ಪುತ್ರ ಧನಂಜಯ್ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ಕೌಟುಂಬಿಕ ಕಲಹ, ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ದೀಕ್ಷಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದ್ದು, ಅತ್ತೆ ಕೂಡ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.  ಮೂಲತಃ ಕಾಳಗಿ ತಾಲ್ಲೂಕಿನ ದೀಕ್ಷಾ ಅವರನ್ನು ಇಲ್ಲಿನ ಪಂಚಶೀಲ ನಗರದ ವಸಂತಶರ್ಮ ಎಂಬು ವವರಿಗೆ ಐದು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿ ದ್ದರು ಎಂಬ ಆರೋಪ ಕೇಳಿ ಬಂದಿದೆ.

ನಿನ್ನೆ ದೀಕ್ಷಾ ತವರು ಮನೆಗೆ ಹೋಗಲು ತಯಾರಿ ನಡೆಸಿದ್ದು, ಗಂಡನ ಮನೆಯವರು ಅದಕ್ಕೆ ಅವಕಾಶ ನೀಡಿರಲಿಲ್ಲ. ಇದರಿಂದ ಬೇಸತ್ತು ಅವರು ಮನೆಯಲ್ಲೇ ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡಿದ್ದಾರೆ.

ಘಟನೆಯಲ್ಲಿ ತಾಯಿ-ಮಗಳು ಸಾವನ್ನಪ್ಪಿದ್ದು, ಮಗ ತೀವ್ರವಾಗಿ ಗಾಯ ಗೊಂಡಿದ್ದಾನೆ. ಈ ಘಟನೆಗೆ ಗಂಡನ ಮನೆಯವರೇ ಕಾರಣ ಎಂದು ಆರೋಪಿಸಿ ದೀಕ್ಷಾ ಅವರ ತವರುಮನೆಯವರು ಸ್ಟೇಷನ್ ಬಜಾರ್ ಠಾಣೆ ಪೆÇಲೀಸರಿಗೆ ದೂರು ನೀಡಿದ್ದಾರೆ.

Facebook Comments