ಕೊರೊನಾ ಮುಚ್ಚಿಟ್ಟ ಕಾಲೇಜು..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.4- ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೊರೊನಾ ಕಾಣಿಸಿಕೊಂಡರೂ ಮುಚ್ಚಿಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಒಂದೇ ಕಾಲೇಜಿನಲ್ಲಿ ಆರು ಪ್ರಕರಣಗಳು ಪತ್ತೆಯಾಗಿದ್ದು, ವಿದ್ಯಾರ್ಥಿನಿಯರು ಆತಂಕ ಹೆಚ್ಚಾಗಿದೆ. ಕೇಸ್‍ಗಳ ಸಂಖ್ಯೆಯನ್ನು ಮುಚ್ಚಿಡುವ ಪ್ರಯತ್ನ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ನಮ್ಮ ಕಾಲೇಜಿನಲ್ಲಿ ಯಾವುದೇ ಕೇಸ್ ಇಲ್ಲ ಎಂದು ಆಡಳಿತ ಮಂಡಳಿ ಹೇಳುತ್ತಿದೆ. ವಿವಿಧ ರಾಜ್ಯಗಳಿಂದ ಬಂದು ಕಾಲೇಜು ಹಾಸ್ಟೆಲ್‍ನಲ್ಲಿ ವಾಸವಿದ್ದ ವಿದ್ಯಾರ್ಥಿನಿಯರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.
ಬಿಬಿಎಂಪಿ ಆರೋಗ್ಯ ಅಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ದೃಢೀಕರಿಸಬೇಕಾಗಿದೆ.

Facebook Comments