ಮಧ್ಯಪ್ರದೇಶದ ಸಿಎಂಗೂ ಕೊರೊನಾ ಪಾಸಿಟಿವ್..!

ಈ ಸುದ್ದಿಯನ್ನು ಶೇರ್ ಮಾಡಿ

ಭೂಪಾಲ್,ಜು.25-ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಅವರಿಗೂ ಮಹಾಮಾರಿ ಕೊರೊನಾ ಆವರಿಸಿದೆ. ಇದನ್ನು ಸ್ವತಃ ಶಿವರಾಜ್‍ಸಿಂಗ್ ಚವ್ಹಾಣ್ ಅವರೇ ಬಹಿರಂಗಪಡಿಸಿದ್ದು, ನನಗೆ ಇಂದು ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಹೀಗಾಗಿ ಕಳೆದ ಕೆಲವು ದಿನಗಳ ಹಿಂದೆ ನನ್ನ ಭೇಟಿಗೆ ಆಗಮಿಸಿದ್ದ ಸಚಿವರು, ಶಾಸಕರು, ಅಧಿಕಾರಿ ವರ್ಗ ಸೇರಿದಂತೆ ಎಲ್ಲರೂ ತಕ್ಷಣವೇ ವೈದ್ಯಕೀಯ ತಪಾಸಣೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.

ಅಲ್ಲದೆ ನಾನು ಸ್ವಯಂ ಕ್ವಾರಂಟೈನ್‍ಗೆ ಒಳಗಾಗಲಿದ್ದು, ಸರ್ಕಾರದ ಮಾರ್ಗಸೂಚಿ ಪ್ರಕಾರವೇ ಚಿಕಿತ್ಸೆ ಪಡೆಯಲಿದ್ದೇನೆ. ಯಾರೊಬ್ಬರೂ ಗಾಬರಿಪಡಬೇಕಾದ ಅಗತ್ಯವಿಲ್ಲ. ಇದನ್ನು ಆತ್ಮಸ್ಥೈರ್ಯದಿಂದಲೇ ಎದುರಿಸುತ್ತೇವೆ ಎಂದು ಚವ್ಹಾಣ್ ಟ್ವೀಟ್ ಮಾಡಿದ್ದಾರೆ.

ವೈದ್ಯರ ಸೂಚನೆಯಂತೆ ಕ್ವಾರಂಟೈನ್ ಒಳಗಾಗಲಿದ್ದು, ಪ್ರತಿದಿನ ಕೋವಿಡ್ ನಿಯಂತ್ರಣ ಕುರಿತ ಅಧಿಕಾರಿಗಳ ಸಭೆಯನ್ನು ವಿಡಿಯೋ ಮೂಲಕ ನಡೆಸುವುದಾಗಿ ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಕಳೆದ ಒಂದು ವಾರದ ಅವಧಿಯಲ್ಲಿ ಶಿವರಾಜ್ ಸಿಂಗ್ ಚವ್ಹಾಣ್ ಅವರನ್ನು ಸಂಪುಟ ಸಹೋದ್ಯೋಗಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಹೀಗಾಗಿ ಯಾರು ಯಾರು ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದರೋ ಅವರೆಲ್ಲರೂ ಕೋವಿಡ್ ತಪಾಸಣೆಗೊಳಪಡಲು ಸೂಚಿಸಿದ್ದಾರೆ.

Facebook Comments

Sri Raghav

Admin