ಎತ್ತಿನಹೊಳೆಯಿಂದ ಕೃಷಿ ಕ್ಷೇತ್ರದಲ್ಲಿ ಪ್ರಗತಿ: ಮೊಯ್ಲಿ

ಈ ಸುದ್ದಿಯನ್ನು ಶೇರ್ ಮಾಡಿ

Veerappa Moilyಚಿಕ್ಕಬಳ್ಳಾಪುರ,ಡಿ.10-ಎತ್ತಿನ ಹೊಳೆ ಮತ್ತು ಹೆಚ್.ಎನ್.ವ್ಯಾಲಿ ಯೋಜನೆಗಳ ಮೂಲಕ ರೈತರು ಕೃಷಿ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬಹುದು. ಕೆರೆಗಳಿಗೆ ನೀರು ಬಂದ ನಂತರ ಯಾವ ಋತುವಿನಲ್ಲಿ ಯಾವ ಬೆಳೆ ಬೆಳೆಯಬೇಕು ಎಂಬುದರ ಕುರಿತು ಸಭೆ ಕರೆದು ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದು ಸಂಸದ ಡಾ.ವೀರಪ್ಪ ಮೊಯ್ಲಿ ತಿಳಿಸಿದರು. ಬೆಂಗಳೂರು ನಗರದ ಹೆಬ್ಬಾಳ-ನಾಗವಾರ ಕಣಿವೆಯ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಚಿಕ್ಕಬಳ್ಳಾಪುರ ಕೆರೆಗಳಿಗೆ ತುಂಬಿಸಲು ಚಿಕ್ಕಬಳ್ಳಾಪುರ ಜಿಲ್ಲೆಯ ಮರಳೂರು ಕೆರೆಯ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇಡೀ ನಮ್ಮ ಕ್ಷೇತ್ರದ ರೈತರ ಬದುಕಿನಲ್ಲಿ ಹೊಸತನದ ಕ್ರಾಂತಿಯಾಗುತ್ತಿದೆ. ಎತ್ತಿನ ಹೊಳೆ ಮತ್ತು ಹೆಚ್.ಎನ್.ವ್ಯಾಲಿ ಯೋಜನೆಗಳ ಮೂಲಕ ರೈತರು ಕೃಷಿ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬಹುದು. ಇದರಿಂದಾಗಿ ಅಂತರ್ಜಲದ ಮಟ್ಟ ವೃದ್ಧಿಗೆ ಸಹಕಾರಿಯಾಗಲಿದೆ. ಕೆರೆಗಳಿಗೆ ನೀರು ಬಂದ ನಂತರ ಮುಂದಿನ ದಿನಗಳಲ್ಲಿ ರೈತರು ಬೆಳೆಯುವ ಬೆಳೆಗಳಲ್ಲಿ ಯಾವುದಕ್ಕೆ ಪ್ರ್ರಾಮುಖ್ಯತೆ ನೀಡಬೇಕು ಎಂಬುದರ ಬಗ್ಗೆ ತಜ್ಞರೊಂದಿಗೆ ಚರ್ಚಿಸಲಾಗುವುದು ಎಂದರು.  ಸಚಿವ ಎನ್.ಹೆಚ್.ಶಿವಶಂಕರ್‍ರೆಡ್ಡಿ ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರತಿಷ್ಟಿತ ನೀರಾವರಿ ಯೋಜನೆಗಳಾದ ಎತ್ತಿನ ಹೊಳೆ ಮತ್ತು ಹೆಚ್.ಎನ್. ವ್ಯಾಲಿ ಯೋಜನೆ ಸಾಕಷ್ಟು ಪ್ರಗತಿ ಕಾರ್ಯದಲ್ಲಿದೆ. ಎತ್ತಿನ ಹೊಳೆ ಯೋಜನೆ ಮೂಲಕ ಗೌರಿಬಿದನೂರು ತಾಲ್ಲೂಕಿನ 90 ಕೆರೆಗಳಿಗೆ ನೀರು ಬರಲಿದ್ದು, ಹೆಚ್.ಎನ್. ವ್ಯಾಲಿ ಯೋಜನೆ ಮೂಲಕ ಜಿಲ್ಲೆಗೆ 44 ಕೆರೆಗಳಿಗೆ ಹಾಗೂ ಗೌರಿಬಿದನೂರು ತಾಲ್ಲೂಕಿನ 08 ಕೆರೆಗಳಿಗೆ ನೀರು ಹರಿಯಲಿದೆ ಎಂದರು.

ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಾಗರಾಜ್ ಮಾತನಾಡಿ, 2014ರಲ್ಲಿ ಹೆಚ್.ಎನ್. ವ್ಯಾಲಿ ಯೋಜನೆ ಚಿಂತನೆ ಆರಂಭಗೊಂಡಿತ್ತು, 883 ಕೋಟಿ ವೆಚ್ಚದ ಯೋಜನೆ ಇದಾಗಿದೆ. ಒಟ್ಟು 115 ಕಿ.ಮೀ ಪೈಪ್‍ಲೈನ್ ಬರಲಿದ್ದು, 108 ಕಿ.ಮೀ.ಗೆ ಒಪ್ಪಿಗೆ ಸಿಕ್ಕಿದೆ. ಇದರಲ್ಲಿ 70 ಕಿ.ಮೀ ಪೈಪ್‍ಲೈನ್ ಅಳವಡಿಸಲಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ 05 ಕಡೆ ಪಂಪ್ ಹೌಸ್ ನಿರ್ಮಾಣ ಮಾಡಲಾಗುತ್ತಿದ್ದು, ಹೆಣ್ಣೂರು, ಬಾಗಲೂರು, ಹೆಬ್ಬಾಳ, ಕಂದವಾರ ಹೊರಮಾವು ಪ್ರದೇಶದಲ್ಲಿ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.
ಜಿಪಂ ಅಧ್ಯಕ್ಷ ಚ್.ವಿ. ಮಂಜುನಾಥ್, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ನರಸಿಂಹಮೂರ್ತಿ ಸೇರಿದಂತೆ ಮುಂತಾದ ಮುಖಂಡರು ಉಪಸ್ಥಿತರಿದ್ದರು.

Facebook Comments