“ನನಗೆ ನೀವು ನೀಡಿರುವ ನಿಗಮ ಮಂಡಳಿ ಸ್ಥಾನ ಬೇಕಾಗಿಲ್ಲ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.28-ತಮಗೆ ನೀಡಿರುವ ನಿಗಮ ಮಂಡಳಿ ಸ್ಥಾನವನ್ನು ಅಲಂಕರಿಸುವುದಿಲ್ಲ ಎಂದು ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಎಂ.ಸಿ.ಎ ನಿಗಮ ಅಧ್ಯಕ್ಷ ಸ್ಥಾನ ಅಲಂಕರಿಸುವುದಿಲ್ಲ, ಅನ್ಯತಾ ಭಾವಿಸಬೇಡಿ, ಉಳಿದ 3 ವರ್ಷ ತಮ್ಮ ನಾಯಕತ್ವದ ಬಿಜೆಪಿ ಆಡಳಿತವೇ ನನಗೆ ಅತಿ ಮುಖ್ಯ ಎಂಬ ಮಾತು ಹೇಳಿದ್ದಾರೆ.

ನಿಗಮ ಮಂಡಳಿ ಸ್ಥಾನ ನನಗೆ ಬೇಡ, ಎಸ್ಸಿ ಬಲಗೈ ಸಮುದಾಯದ ಮೂವರು ಶಾಸಕರುಗಳಲ್ಲಿ ಒಬ್ಬರನ್ನು ಸಚಿವರನ್ನಾಗಿ ಮಾಡಿ ಎಂಬುದನ್ನು ಪತ್ರದಲ್ಲಿ ತಿಳಿಸಿದ್ದಾರೆ.

ಇದರಿಂದ 2023ರ ಚುನಾವಣೆಗೆ ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ ಕುಮಾರಸ್ವಾಮಿ ಹೇಳಿದ್ದಾರೆ.

Facebook Comments

Sri Raghav

Admin