ಸಂಸದರ ನಳೀನ್‍ಕುಮಾರ್ ಕಟೀಲ್ ಕಚೇರಿಗೆ ಮುತ್ತಿಗೆ ಯತ್ನ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು, ಡಿ.26- ಸಿಎಫ್‍ಐ ಮುಖಂಡರ ಮೇಲೆ ಇಡಿ ತನಿಖೆ ವಿರೋಧಿಸಿ ನಗರದಲ್ಲಿ ಬೃಹತ್ ಧರಣಿ ನಡೆಸಲಾಯಿತು. ಇದೇ ವೇಳೆ ಮಂಗಳೂರಿನಲ್ಲಿರುವ ಸಂಸದ ನಳೀನ್‍ಕುಮಾರ್ ಕಟೀಲ್ ಅವರ ಕಚೇರಿಗೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಮುಂದಾದರು. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಯತ್ನಿಸಿದಾಗ ಪೆÇಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ಭಾರೀ ತಳ್ಳಾಟ ಮತ್ತು ನೂಕಾಟ ನಡೆಯಿತು.

ಕ್ಯಾಂಪಸ್ ಫ್ರಂಟ್ ಇಂಡಿಯಾ ಸಂಘಟನೆ ಮುಖಂಡರ ಮೇಲಿನ ಇಡಿ ತನಿಖೆ ವಿರೋಧಿಸಿ ಇಂದು ಬೃಹತ್ ಪ್ರತಿಭಟನೆ ನಡೆಸಿದ ವೇಳೆ ನಡೆದ ಈ ಘಟನೆಯಿಂದ ನಗರದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

Facebook Comments