ಡಿಜೆಹಳ್ಳಿ ದುಷ್ಕರ್ಮಿಗಳನ್ನು ದೇಶದ್ರೋಹದಡಿ ಬಂಧಿಸಿ : ಶಾಸಕ ರೇಣುಕಾಚಾರ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.12-ನಿನ್ನೆ ರಾತ್ರಿ ಡಿಜೆಹಳ್ಳಿ ಹಾಗೂ ಕೆಜಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೋಮುಗಲಭೆ ಸಂಭವಿಸಲು ಕಾರಣಕರ್ತರಾದ ದುಷ್ಕರ್ಮಿಗಳನ್ನು ದೇಶ ದ್ರೋಹದಡಿ ಬಂಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

ಘಟನೆ ಸಂಬಂಧ ವಿಡಿಯೋ ಮೂಲಕ ಮಾತನಾಡಿರುವ ಅವರು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ದುಷ್ಕರ್ಮಿಗಳಿಗೆ ತಕ್ಕ ಪಾಠ ಕಲಿಸಲೇಬೇಕು. ಘಟನೆಯಲ್ಲಿ ಯಾವ ಯಾವ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದಾರೋ ಅವರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ತಕ್ಷಣವೇ ಬಂಧನಕ್ಕೊಳಪಡಿಸಬೇಕೆಂದು ಒತ್ತಾಯ ಮಾಡಿದರು.

ಘಟನೆಯಲ್ಲಿ ಭಾಗಿಯಾದವರ ಮೇಲೆ ಕಾನೂನು ಕ್ರಮ ಜರುಗಿಸುವ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ, ಗೃಹ ಸಚಿವ ಬವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆಯಲಾಗುವುದು. ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ನಿರ್ದಾಕ್ಷಿಣ್ಯವಾಗಿ ಅವರನ್ನು ಹತ್ತಿಕ್ಕಬೇಕೆಂದು ಆಗ್ರಹಿಸಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಸರ್ಕಾರ ಅಕಾರದಲ್ಲಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೆಟ್ಟ ಹೆಸರು ತರಲು ಕಾಣದ ಕೈಗಳು ಈ ದುಷ್ಕøತ್ಯ ನಡೆಸಿರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಕೋಮುಗಲಭೆಗೆ ಪ್ರಚೋದನೆ ನೀಡುವವರು ಯಾರೇ ಆಗಲಿ, ಅಂಥವರನ್ನು ಹತ್ತಿಕ್ಕಲು ನಮ್ಮ ಸರ್ಕಾರ ಹಿಂದೆಮುಂದೆ ನೋಡುವುದಿಲ್ಲ ಎಂದು ರೇಣುಕಾಚಾರ್ಯ ಎಚ್ಚರಿಕೆ ನೀಡಿದರು.

ಸರ್ಕಾರಕ್ಕೆ ಸವಾಲು ಹಾಕುವ ರೀತಿಯಲ್ಲಿ ಕೆಲವು ವರ್ತನೆ ಮಾಡಿದ್ದಾರೆ. ಎಸ್‍ಡಿಪಿಐ ಇಲ್ಲವೇ ಕೆಎಫ್‍ಡಿ ಸೇರಿದಂತೆ ಯಾವುದೇ ಸಂಘಟನೆಗಳ ಮುಖಂಡರು ಕಾನೂನು ಕೈಗೆತ್ತಿಕೊಳ್ಳಬಾರದು.

ಕೆಲವರು ತಾವೇ ಕಾನೂನಿಗಿಂತ ಮೇಲೆ ಎಂಬಂತೆ ವರ್ತಿಸುತ್ತಿದ್ದಾರೆ. ಅವರನ್ನು ನಿಯಂತ್ರಿಸುವುದು ಹೇಗೆ ಎಂದು ಸರ್ಕಾರಕ್ಕೆ ಗೊತ್ತಿದೆ ಎಂದು ಹೇಳಿದರು.

ತಕ್ಷಣವೇ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಸಭೆ ಕರೆದು ದುಷ್ಕøತ್ಯದಲ್ಲಿ ಭಾಗಿಯಾದವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಗಲಭೆಯ ಹಿಂದೆ ಅನೇಕ ಸಂಘಟನೆಗಳ ಕೈವಾಡವಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಹೇಳಿದರು.

ಈ ಹಿಂದೆ ಹಿಂದೂ ದೇವತೆಗಳು, ಹಿಂದೂ ಧಾರ್ಮಿಕ ಭಾವನೆಗಳು, ಪ್ರಧಾನಿ ನರೇಂದ್ರಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಪೆÇೀಸ್ಟ್ ಮಾಡಲಾಗಿತ್ತು.

ಆಗ ಯಾರೊಬ್ಬರೂ ಪ್ರಚೋದನೆಗೆ ಒಳಗಾಗದೆ ಸಂಯಮದಿಂದ ಇದ್ದರು. ಒಂದು ವೇಳೆ ಮೊಹಮ್ಮದ್ ಪೈಗಂಬರ್‍ಗೆ ಅವಮಾನವಾಗುವಂತಹ ಪೆÇೀಸ್ಟ್‍ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಪೆÇಲೀಸ್ ಠಾಣೆಗೆ ದೂರು ಕೊಡಬೇಕಿತ್ತು.

ಯಾವ ರೀತಿ, ನಿಯಮಗಳನ್ನು ಪಾಲಿಸದೆ ಏಕಾಏಕಿ ಕಾನೂನು ಕೈಗೆತ್ತಿಕೊಂಡಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ನಾಯಕರು ಈಗಲಾದರೂ ವೋಟ್ ಬ್ಯಾಂಕ್ ರಾಜಕಾರಣ ನಿಲ್ಲಿಸಬೇಕು.

ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಘಟನೆ ಕುರಿತಂತೆ ಮೌನಕ್ಕೆ ಜಾರಿರುವುದು ಆ ಪಕ್ಷದ ನೀತಿ ಏನೆಂಬುದನ್ನು ತಿಳಿಸುತ್ತದೆ.

ಈಗಲಾದರೂ ನಿಮ್ಮ ಮೌನ ಮುರಿದು ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಲು ಒತ್ತಾಯ ಮಾಡಿ. ಪ್ರಚೋದನಾಕಾರಿ ಹೇಳಿಕೆ ನೀಡಿರುವವರು ಮತ್ತು ಕೋಮುಗಲಭೆಯಲ್ಲಿ ಭಾಗಿಯಾದವರ ಮೇಲೆ ಕಾನೂನು ಕ್ರಮ ಜರುಗಿಸಲು ಈವರೆಗೂ ಕಾಂಗ್ರೆಸ್ ಆಗಲಿ ಇಲ್ಲವೇ ಆ ಪಕ್ಷದ ಮುಖಂಡರು ಹೇಳಿಕೆ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಡುತ್ತದೆ ಎಂದು ರೇಣುಕಾಚಾರ್ಯ ಹೇಳಿದರು.

Facebook Comments

Sri Raghav

Admin