ಉಪಚುನಾವಣೆಯಲ್ಲಿ ಸಂಸದೆ ಸುಮಲತಾ ಯಾರ ಕಡೆ..? ಕೊನೆಗೂ ಸಿಕ್ತು ಉತ್ತರ

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ, ನ.27- ನಾನು ಯಾರ ಪರವಾಗೂ ಪ್ರಚಾರಕ್ಕೆ ಹೋಗಲ್ಲ ಎಂದು ಸಂಸದೆ ಸುಮಲತಾ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಕೆ.ಆರ್.ಪೇಟೆ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ಅಬ್ಬರ ಜೋರಾಗಿದ್ದು, ಈ ನಡುವೆ ಸಂಸದೆ ಸುಮಲತಾ ಅವರು ಯಾರಿಗೆ ಬೆಂಬಲ ನೀಡುತ್ತಾರೆ ಎಂಬುದು ಭಾರೀ ಕುತೂಹಲಕ್ಕೆ ಎಡೆಮಾಡಿಕೊಟ್ಟಿತ್ತು.

ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಪರವಾಗಿ ಪ್ರಚಾರ ನಡೆಸುವಂತೆ ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಸುಮಲತಾ ಅವರಿಗೆ ಮನವಿ ಮಾಡಿದ್ದರು. ಕಾಂಗ್ರೆಸ್ ಪರವಾಗಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸುಮಲತಾ ಅವರನ್ನು ಸಂಪರ್ಕಿಸಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಕೇಳಿದ್ದರು.

ಆದರೆ, ಇವೆಲ್ಲವನ್ನೂ ನಯವಾಗಿಯೇ ದೂರ ತಳ್ಳಿರುವ ಸುಮಲತಾ ಅವರು ಯಾರ ಪರವಾಗಿಯೂ ಚುನಾವಣಾ ಪ್ರಚಾರ ಮಾಡಲ್ಲ. ಯಾರೂ ನನಗೆ ಒತ್ತಡ ಹೇರುತ್ತಿಲ್ಲ ಎಂದು ತಿಳಿಸಿದ್ದಾರೆ.

ಒಳ್ಳೆಯವರನ್ನು ಜನ ಆಯ್ಕೆ ಮಾಡುತ್ತಾರೆ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು ಕ್ಷೇತ್ರದ ಜನರಲ್ಲಿ ಮನವಿ ಮಾಡುತ್ತೇನೆ ಎಂದು ಸುಮಲತಾ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

Facebook Comments