ಎಂಎಸ್ ಬಿಲ್ಡಿಂಗ್‍ನಲ್ಲಿ ಅಗ್ನಿ ಆಕಸ್ಮಿಕ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.10- ಬಹುಮಹಡಿ ಕಟ್ಟಡದ ಎಂಎಸ್ ಬಿಲ್ಡಿಂಗ್ ಕೊಠಡಿಯೊಂದರಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಎಂಎಸ್ ಬಿಲ್ಡಿಂಗ್‍ನ ಎರಡನೆ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಇ-ಆಡಳಿತ ಸಲಹೆಗಾರ ಚೇಳೂರು ಸುದರ್ಶನ್ ಅವರ ಕೊಠಡಿಯ ಬಾಗಿಲು ತೆರೆದು ಇಂದು ಬೆಳಗ್ಗೆ ಸಿಬ್ಬಂದಿ ಲೈಟ್ ಹಾಕಿದಾಗ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ.

ವಾಹನದೊಂದಿಗೆ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತವಾಗಿಲ್ಲ. ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿ ಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಕೊಠಡಿಯಲ್ಲಿ ಸರ್ಕಾರದ ಕೆಲಸಗಳಿಗೆ ಸಂಬಂಧಿಸಿದ ದಾಖಲೆಗಳಿದ್ದು, ಅದೃಷ್ಟವಶಾತ್ ಯಾವುದೇ ದಾಖಲೆಗಳಿಗೂ ಬೆಂಕಿ ತಗುಲಿಲ್ಲ.

Facebook Comments