ರಮೇಶ್‍ಕುಮಾರ್ ವಿರುದ್ಧ ಎಂಟಿಬಿ ಕಿಡಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.13- ಲೋಕಸಭೆ ಚುನಾವಣೆಯಲ್ಲಿ ಪಕ್ಷ ದ್ರೋಹ ಮಾಡಿದ ರಮೇಶ್ ಕುಮಾರ್ ಅವರನ್ನು ಕಾಂಗ್ರೆಸ್ ಏಕೆ ಉಚ್ಛಾಟನೆ ಮಾಡಿಲ್ಲ ಎಂದು ಅನರ್ಹಗೊಂಡಿರುವ ಮಾಜಿ ಶಾಸಕ ಎಂ.ಟಿ.ಬಿ.ನಾಗರಾಜ್ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ ಸತ್ಯ ಶೋಧನ ಸಮಿತಿ ಕೂಡ ಲೋಕಸಭೆ ಚುನಾವಣೆಯಲ್ಲಿ ರಮೇಶ್‍ಕುಮಾರ್ ಪಕ್ಷ ದ್ರೋಹ ಮಾಡಿದ್ದಾರೆ ಎಂದು ವರದಿ ನೀಡಿದೆ ಎಂದು ಕಿಡಿಕಾರಿದರು.

ಕೋಲಾರ ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡ ಕೆ.ಎಚ್.ಮುನಿಯಪ್ಪ ಅವರು ಕೂಡ ಪಕ್ಷದ ಹೈಕಮಾಂಡ್‍ಗೆ ವರದಿ ನೀಡಿದ್ದಾರೆ.  ರಮೇಶ್‍ಕುಮಾರ್ ಅವರು ಚುನಾವಣೆಯಲ್ಲಿ ಪಕ್ಷಕ್ಕೆ ವಿರುದ್ಧವಾಗಿ ಕೆಲಸ ಮಾಡಿದ್ದಾರೆ ಎಂಬ ಮಾಹಿತಿ ಇದ್ದರೂ ಈವರೆಗೂ ಅವರ ವಿರುದ್ದ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್‍ನ ಅತಿರಥ, ಮಹಾರಥ ನಾಯಕರುಗಳು ಈ ಬಗ್ಗೆ ಏಕೆ ಮಾತನಾಡಿಲ್ಲ ಎಂದು ಸಿದ್ದರಾಮಯ್ಯನವರ ಹೆಸರನ್ನು ಪ್ರಸ್ತಾಪಿಸದೆ ಆಕ್ರೋಶ ವ್ಯಕ್ತಪಡಿಸಿದರು.

ಈ ಮೊದಲು ನನ್ನ ಎದೆ ಬಗೆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಣುತ್ತಾರೆ ಎಂದು ಹೇಳಿದ್ದೆ. ಆದರೆ ಈಗ ಯಾವ ನಾಯಕರು ನನ್ನ ಎದೆಯಲ್ಲಿ ಇಲ್ಲ. ಮತ ಹಾಕುವ ಮತದಾರರು ಮಾತ್ರ ನನ್ನ ಎದೆಯಲ್ಲಿ ಇದ್ದಾರೆ ಎಂದು ಎಂಟಿಬಿ ಹೇಳಿದರು.

Facebook Comments