ಸಚಿವ ಎಂಟಿಬಿ ನಾಗರಾಜ್‌ಗೆ ಶಾಕ್ ಕೊಟ್ಟ ಸಿಎಂ ಬಿಎಸ್‌ವೈ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 7-ಕೇವಲ ಐದು ದಿನದಲ್ಲಿ ಬೀದರ್ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ‌. ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಅವರನ್ನು ಬದಲಿಸಲಾಗಿದೆ. ಲಿಂಬಾವಳಿ ಅವರಿಗೆ ಕೋಲಾರ ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಿಸಿ ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಆದೇಶ ಹೊರಡಿಸಿದೆ.

ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರಿಗೆ ಸಧ್ಯಕ್ಕೆ ಯಾವುದೇ ಜಿಲ್ಲೆ ಉಸ್ತುವಾರಿ ನೀಡಿಲ್ಲ.
ಪಶುಸಂಗೋಪನೆ ಸಚಿವ ಪ್ರಭುಚವ್ಹಾಣ್ ಅವರಿಗೆ ಬೀದರ್ ಜಿಲ್ಲಾ ಉಸ್ತುವಾರಿ ಮತ್ತು ತೋಟಗಾರಿಕೆ ಸಚಿವ ಆರ್.ಶಂಕರ್ ಅವರಿಗೆ ಯಾದಗಿರಿ ಜಿಲ್ಲಾ ಉಸ್ತುವಾರಿ ನೀಡಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಅವರ ನಿರ್ದೇಶನದಂತೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಲಾಗಿದೆ.

Facebook Comments