ಸಿಎಂ ಯಡಿಯೂರಪ್ಪ ವಿರುದ್ಧ ಎಂಟಿಬಿ ಗರಂ.!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.27- ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಅವರು ನಮ್ಮನ್ನು ನೋಡಿದ ಕೂಡಲೇ ಮಂತ್ರಿ ಮಾಡುವುದಾಗಿ ಹೇಳುತ್ತಾರೆ. ಆದರೆ, ಈ ಬಗ್ಗೆ ಇನ್ನೂ ನಿರ್ಧಾರ ಮಾಡಿಯೇ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಸಿಎಂ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ಗೃಹ ಕಚೇರಿ ಕೃಷ್ಣ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದಾಗಲೆಲ್ಲಾ ಮಂತ್ರಿ ಮಾಡ್ತೀನಿ ಅಂತಾರೆ. ಆದರೆ, ಇನ್ನೂ ದೃಢ ನಿರ್ಧಾರ ಪ್ರಕಟಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಯಡಿಯೂರಪ್ಪನವರು ಅವರ ಪಕ್ಷದಲ್ಲಿ ಯಾರನ್ನು ಬೇಕಾದರೂ ಮಂತ್ರಿಯನ್ನಾಗಿ ಮಾಡಿಕೊಳ್ಳಲಿ. ನಾವು ತ್ಯಾಗ ಮಾಡಿ ಬಂದಿದ್ದೇವೆ. ಮೊದಲು ನಮಗೆ ಮಂತ್ರಿಸ್ಥಾನ ಕೊಡಬೇಕು ಎಂದು ನಾಗರಾಜ್ ಹೇಳಿದ್ದಾರೆ.

Facebook Comments