30 ಸಿಬ್ಬಂದಿಗಳಿಗೆ ಸೋಂಕು, ಎಂಟಿಆರ್ ಸಂಸ್ಥೆ ಸೀಲ್‍ಡೌನ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜು.15- ಪ್ರತಿಷ್ಠಿತ ಎಂಟಿಆರ್ ಆಹಾರ ತಯಾರಿಕಾ ಸಂಸ್ಥೆ ಸಿಬ್ಬಂದಿಗೂ ಕೊರೊನಾ ಸೋಂಕು ತಗುಲಿದ್ದು, ಬೊಮ್ಮಸಂದ್ರದಲ್ಲಿರುವ ಸಂಸ್ಥೆಯನ್ನು ಸೀಲ್‍ಡೌನ್ ಮಾಡಲಾಗಿದೆ.

ಎಂಟಿಆರ್ ಸಂಸ್ಥೆಯಲ್ಲಿ ಆಹಾರ ತಯಾರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ 30ಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

ಮೊದಲು ಕಿಚನ್‍ನಲ್ಲಿ ಕೆಲಸ ಮಾಡುತ್ತಿದ್ದ ಓರ್ವ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿತ್ತು. ಆ ಸಂದರ್ಭದಲ್ಲಿ ಆತನ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲಾಗಿತ್ತು.

ನಂತರ ಮತ್ತೆ ಎಲ್ಲ ಸಿಬ್ಬಂದಿಗಳಿಗೆ ಗಂಟಲು ದ್ರವ ಪರೀಕ್ಷೆ ನಡೆಸಿ 40ಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು, ಇದೀಗ 30 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಎಂಟಿಆರ್ ಮಸಾಲಾ ಪದಾರ್ಥಗಳು ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಗೂ ಹಾಗೂ ಹೊರರಾಜ್ಯಗಳಿಗೂ ಸರಬರಾಜಾಗುತ್ತಿತ್ತು. ಇದೀಗ ಎಂಟಿಆರ್ ಸಂಸ್ಥೆ ಸಿಬ್ಬಂದಿಗಳಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಎದುರಾಗಿದೆ.

Facebook Comments

Sri Raghav

Admin