‘ಮುಂದಿನದಿನಗಳಲ್ಲಿ ಹೂಸ ರಾಜಕೀಯ ಇನ್ನಿಂಗ್ಸ್ ಆರಂಭಿಸುತ್ತೇನೆ’ : ಮುದ್ದಹನುಮೇಗೌಡ

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಮೇ 21- ಎಲ್ಲಾ ಜನ ಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ತುಮಕೂರು ಜಿಲ್ಲೆ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಅಧಿಕಾರಿಗಳು, ಸೇರಿದಂತೆ ಜನರು ನಮ್ಮ ಮೇಲೆ ಅಪಾರವಾದ ವಿಶ್ವಾಸ ಇಟ್ಟಿದ್ದರು. ಅದರಂತೆ ಅವರ ವಿಶ್ವಾಸವನ್ನು ಉಳಿಸಿಕೊಂಡಿದ್ದೇನೆ. ಜನರ ನಿರೀಕ್ಷೆಗೂ ಮೀರಿ ಕೆಲಸ ಮಾಡಿದ ಹೆಮ್ಮೆ ನನಗಿದೆ ಎಂದು ಸಂಸದ ಎಸ್.ಪಿ.ಮುದ್ದಹನುಮೇಗೌಡ ತಿಳಿಸಿದ್ದಾರೆ.

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಹೂಸ ಇನ್ನಿಂಗ್ಸ್ ಜತೆ ಹೂಸ ದಿನಗಳೊಂದಿಗೆ ನಾನು ಜನರೊಂದಿಗೆ ಸಕ್ರೀಯವಾಗಿ ಇರುತ್ತೇನೆ ಎಂದರು. ರಾಷ್ಟ್ರೀಯ ಹೆದ್ದಾರಿ, ರಸ್ತೆ ಅಗಲೀಕರಣ, ವಿವಿಧ ಯೋಜನೆಗಳ ರೈಲ್ವೆ ಕಾಮಗಾರಿಗಳು ಆರಂಭ ವಾಗಿವೆ, ಸ್ಮಾರ್ಟ್ ಸಿಟಿ ಯೋಜನೆ, ಪಾಸ್ ಫೋರ್ಟ್ ಕಚೇರಿ ಅರಂಭ ಸೇರಿದಂತೆ ಹಲವು ಯೋಜನೆಗಳನ್ನು ತುಮಕೂರು ಜಿಲ್ಲೆಗೆ ತಂದಿದ್ದೇನೆ.

ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸಲಾಯಿತು. ಜನರಿಗೆ ನನ್ನ ಸೇವೆಯನ್ನು ಮುಡುಪಾಗಿಟ್ಟಿದ್ದೇನೆ ಎಂದು ಹೇಳಿದ್ದಾರೆ. ನನ್ನ ಅವಧಿಯಲ್ಲಿ ಇಸ್ರೊ, ಹೆಚ್‍ಎಎಲ್ ಘಟಕಗಳು ಆರಂಭವಾಗಿದ್ದು, ಮಹತ್ವ ಪಡೆದಿದೆ ಇಂತಹ ಯೋಜನೆಗಳನ್ನು ಜಿಲ್ಲೆಗೆ ತಂದೆ ಈ ಹೆಮ್ಮೆ ನನಗೆ ಇದೆ ಇಂದು ರಾಜ್ಯದ ಜಿಲ್ಲೆಯ ಜನರಿಗೆ ತಿಳಿದಿದೆ.

ಕಳೆದ ಐದು ವರ್ಷಗಳಲ್ಲಿ ಉತ್ತಮ ಸಂಸದನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿತು ಅಲ್ಲದೆ ಸಂಸತ್‍ನಲ್ಲಿ ಹಲವು ಬಿಲ್ಲುಗಳು ಪಾಸ್ ಆದವು ಇದು ನನಗೆ ಹೆಮ್ಮೆಯ ವಿಚಾರ ಎಂದರು.

ಐದು ವರ್ಷಗಳ ಅವಧಿಯಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದೇನೆ ಎಂಬ ವಿಶ್ವಾಸ ನನಗಿದೆ. ಸಮೀಕ್ಷೆ ಗಳ ಪ್ರಕಾರ ಮತ್ತೆ ಎನ್‍ಡಿಎ ಬರುತ್ತದೆ. ನರೇಂದ್ರ ಮೋದಿ ಅವರು ಪ್ರಧಾನಿ ಆಗುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಅದರ ಬಗ್ಗೆ ಎನೂ ಹೇಳಲಾರೆ. ನಾನು ಎಲ್ಲರನ್ನೂ ಗೌರವಿಸುತ್ತೇನೆ ಎಂದು ಉತ್ತರಿಸಿದರು. ಸುದ್ದಿಗೋಷ್ಠಿಯಲ್ಲಿ ರಾಯಸಂದ್ರದ ರವಿ ಹಾಜರಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ