ಸಿಎಂಗೆ ರಕ್ತದಲ್ಲಿ ಪತ್ರ ಬರೆದ ಮುದ್ದೇಬಿಹಾಳದ ಯುವಕ..!

ಈ ಸುದ್ದಿಯನ್ನು ಶೇರ್ ಮಾಡಿ

Blld-Leter--01

ಮುದ್ದೇಬಿಹಾಳ. ಜ. 1 : ತಾಲ್ಲೂಕಿನ ನಾಲತವಾಡ ಪಟ್ಟಣದ ತಮ್ಮ ಊರಿನಲ್ಲಿ ಸರ್ಕಾರಿ ಪ್ರೌಢಶಾಲೆ ಹಾಗೂ ಕಾಲೇಜು ಆರಂಭಿಸುವಂತೆ ಯುವಕನೊಬ್ಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾನೆ.

ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ನಿವಾಸಿ ವಿಜಯರಂಜನ್ ಜೋಶಿ ಎಂಬಾತ ಸಿಎಂ ಕುಮಾರಸ್ವಾಮಿ ಸೇರಿದಂತೆ ಶಾಸಕರು, ಜಿಲ್ಲಾಧಿಕಾರಿ, ಪದವಿಪೂರ್ವ ನಿರ್ದೇಶಕರು ಹಾಗೂ ಉಪನಿರ್ದೇಶಕರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾನೆ.

ಇದೇ ವಿಚಾರವಾಗಿ ಜೋಶಿ ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದ. ಇದನ್ನು ಪರಿಗಣಿಸಿದ ಪ್ರಧಾನಿ ಕಾರ್ಯಾಲಯ ಪರಿಶೀಲನೆ ನಡೆಸುವಂತೆ ರಾಜ್ಯ‌ ಸರ್ಕಾರಕ್ಕೆ ಪತ್ರ ಬರೆದಿತ್ತು. ಆದರೆ, ಇದುವರೆಗೂ ಯಾವುದೇ ಶಾಲಾ-ಕಾಲೇಜು ಕಟ್ಟಡ ನಿರ್ಮಾಣ ಆಗದಿರುವುದು ಜೋಶಿಗೆ ನೋವುಂಟಾಗಿದೆ.

ಈಗಲಾದರೂ ಹೈಸ್ಕೂಲ್ ಮತ್ತು ಕಾಲೇಜು ನಿರ್ಮಾಣ ಮಾಡಿ ಈ ಭಾಗದಲ್ಲಿರುವ ಅನಕ್ಷರತೆ ಹೋಗಲಾಡಿಸಿ ಎಂದು ಸಿಎಂ ಕುಮಾಸ್ವಾಮಿಗೆ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾನೆ.

Facebook Comments

Sri Raghav

Admin