ಮೊಹರಂ ಮೆರವಣಿಗೆ ವೇಳೆ ಅಲ್ಲಲ್ಲಿ ಘರ್ಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ಪಾಟ್ನಾ, ಸೆ.11- ಬಿಹಾರದ ಮೂರು ಜಿಲ್ಲೆಗಳಲ್ಲಿ ಮೊಹರಂ ಮೆರವಣಿಗೆ ವೇಳೆ ಘರ್ಷಣೆಗಳು ನಡೆದು ಕೆಲವರು ಗಾಯಗೊಂಡಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಬಿಹಾರದ ನವಾಡಾ, ಬಿಟ್ಟಿಯಾ ಮತ್ತು ಜಾಜಿಪುರ್ ಜಿಲ್ಲೆಗಳಲ್ಲಿ ಮೊಹರಂ ಕಡೆ ದಿನದ ಮೆರವಣಿಗೆ ವೇಳೆ ಈ ಘರ್ಷಣೆ ಮತ್ತು ಸಣ್ಣ ಪುಟ್ಟ ಹಿಂಸಾಚಾರಗಳು ನಡೆದಿವೆ.

ಕೆಲವು ದುಷ್ಕರ್ಮಿಗಳು ಮೆರವಣಿಗೆ ಸಾಗುತ್ತಿದ್ದ ಜನರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಉದ್ವಿಗ್ನ ವಾತಾವರಣವನ್ನು ಉಂಟಾಗಿ ಘರ್ಷಣೆಗಳು ನಡೆದವು. ಈ ಗಲಭೆಯಲ್ಲಿ ಕೆಲವರಿಗೆ ಗಾಯಗಳಾಗಿವೆ. ಪೊಲೀಸರು ಸಕಾಲದಲ್ಲಿ ಮಧ್ಯ ಪ್ರವೇಶಿಸಿ ಉದ್ರಿಕ್ತ ಗುಂಪನ್ನು ಬಲ ಪ್ರಯೋಗದಿಂದ ಚದುರಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿದ್ದು ,ಕೆಲವರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ