ಮುಖ್ಯಮಂತ್ರಿ ಚಂದ್ರುಗೆ ಹೃದಯ ಶಸ್ತ್ರಚಿಕಿತ್ಸೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.30-ಜುಲೈ ಮೊದಲ ವಾರದಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾ ಗುತ್ತಿದ್ದು, ಕೆಲವು ವಾರಗಳ ವಿಶ್ರಾಂತಿ ನಂತರ ಕಲಾ ಸೇವೆಯನ್ನು ಮುಂದುವರೆಸುವುದಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.

ಜಯದೇವ ಆಸ್ಪತ್ರೆಯಲ್ಲಿ ಆ್ಯಂಜಿಯೋಗ್ರಾಂ ಮಾಡಿಸಿಕೊಂಡ ನಂತರ ತಮ್ಮ ಹೃದಯದ ಮೂರು ರಕ್ತನಾಳಗಳಲ್ಲಿ ರಕ್ತಹೆಪ್ಪುಗಟ್ಟಿದ್ದು, ತೆರೆದ ಶಸ್ತ್ರಚಿಕಿತ್ಸೆ ನಡೆಸಬೇಕಾಗಿದೆ ಎಂದು ವೈದ್ಯರು ಸಲಹೆ ಮಾಡಿದ್ದಾರೆ.

ತಪಾಸಣೆಗೊಳಗಾಗುವವರೆಗೂ ಯಾವುದೇ ರೀತಿಯ ಹೃದಯ ಸಂಬಂಧಿ ತೊಂದರೆಯ ಸೂಚನೆಗಳು ಭಾಸವಾಗಿರಲಿಲ್ಲ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನನ್ನ ಮೇಲಿನ ಪ್ರೀತಿ ಮತ್ತು ಅಭಿಮಾನ ದಿಂದ ಕಲಾ ಬಂಧುಗಳು, ಹಿತೈಷಿಗಳು ಆಸ್ಪತ್ರೆಗೆ ಬಂದು ಆರೋಗ್ಯ ವಿಚಾರಿಸುವ ಪ್ರಯತ್ನ ಮಾಡುವುದರಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ಇತರೆ ರೋಗಿಗಳಿಗೆ ತೊಂದರೆಯಾಗುತ್ತದೆ.

ಇದನ್ನು ಗಮನ ದಲ್ಲಿಟ್ಟುಕೊಂಡು ಆಶೀರ್ವದಿಸಿದರೆ ಸಾಕು ಎಂದು ಅವರು ಮನವಿ ಮಾಡಿದ್ದಾರೆ.  ಮೆರಿಕ ಪ್ರವಾಸ ಕೈಗೊಳ್ಳುವ ಹಿನ್ನೆಲೆ ಯಲ್ಲಿ ಜಯದೇವ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡಾಗ ನನ್ನ ಹೃದಯ ದಲ್ಲಿ ಕೆಲವು ತೊಂದರೆಗಳಿರುವುದು ಕಂಡು ಬಂದಿತ್ತು.

ಕಳೆದ 2 ವರ್ಷಗಳಿಂದಲೂ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದುಕೊಂಡಿ ರುತ್ತೇನೆ ಎಂದಿರುವ ಅವರು, ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ ಹಿತೈಷಿಗಳು, ಮಾಧ್ಯಮದವರಿಗೆ ಧನ್ಯವಾದ ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin