ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಮತದಾನದ ಅವಧಿ ವಿಸ್ತರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.25- ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ನಗರಸಭೆಯ 31 ವಾರ್ಡ್‍ಗಳಿಗೆ ಸೆ.3ರಂದು ನಡೆಯಲಿರುವ ಮತದಾನದ ಅವಧಿಯನ್ನು ಒಂದು ಗಂಟೆಗಳ ಕಾಲ ವಿಸ್ತರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ಶ್ರೀನಿವಾಸ್ ಆದೇಶಿಸಿದ್ದಾರೆ.

ಕೋವಿಡ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಸಾರ್ವಜನಿಕ ಅಂತರ ಕಾಪಾಡಿಕೊಂಡು ಮತದಾನ ಮಾಡಲು ಮತದಾರರಿಗೆ ಅವಕಾಶ ಕಲ್ಪಿಸಲಾಗುವುದು. ಸಾರ್ವಜನಿಕರು ಮುಕ್ತವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಮಾಡುವ ದೃಷ್ಟಿಯಿಂದ ಬೆಳಗ್ಗೆ 7 ಗಂಟೆಯಿಂದ ಸಂಜೆ 5ಗಂಟೆಯವರೆಗೆ ನಿಗದಿಯಾಗಿದ್ದ ಮತದಾನದ ಅವಧಿಯನ್ನು ಒಂದು ಗಂಟೆ ಕಾಲ ವಿಸ್ತರಿಸಲಾಗಿದೆ. ಅಂದರೆ ಸಂಜೆ 5ರಿಂದ 6ಗಂಟೆವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook Comments