ಪೂಜೆ ವಿಚಾರಕ್ಕೆ ಅರ್ಚಕನ ಬರ್ಬರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಬೀದರ್,ಜೂ 11- ದೇವಸ್ಥಾನದ ಪೂಜೆ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿನ ಪಾಪನಾಶ ದೇವಾಲಯದ ಅರ್ಚಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ರಮೇಶ್ ಮಲ್ಲಯ್ಯ ಸ್ವಾಮಿ (39) ಕೊಲೆಯಾದ ದುರ್ದೈವಿ. ಬೀದರ್‍ನ ಪಾಪನಾಶ ಕಲ್ಯಾಣ ಮಂಟದಲ್ಲೇ ಆರೋಪಿಗಳು ರಮೇಶ್ ಮೇಲೆ ರಾಡಿನಿಂದ ಹಲ್ಲೆ ಮಾಡಿ ಕೊಲೆಗೈದು, ಪರಾರಿಯಾಗಿದ್ದಾರೆ.

ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ದೇವಸ್ಥಾನದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ, ಶ್ವಾನದಳ ಹಾಗೂ ನ್ಯೂಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ