ಆನೇಕಲ್ : ಪೆಟ್ರೋಲ್‍ ಸುರಿದು ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಆನೇಕಲ್, ಜ.4 – ಹಣಕಾಸಿನ ವಿಚಾರದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ. ಹೊಸಹಳ್ಳಿ ಗ್ರಾಮದ ನಿವಾಸಿ ಜ್ಯೋತಪ್ಪ(51) ಮೃತಪಟ್ಟ ದುರ್ದೈವಿ.

ಕಳೆದ ರಾತ್ರಿ ಪಾಳಯದಲ್ಲಿ ಹೆನ್ನಾಗರ ಗ್ರಾಮದ ರೇಣುಕಾ ಯಲ್ಲಮ್ಮ ದೇವಾಲಯದ ಬಳಿ ಬೈಕ್‍ನಲ್ಲಿ ಬರುತ್ತಿದ್ದಾಗ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಜ್ಯೋತಪ್ಪನಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ.

ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರು ಈ ಕೃತ್ಯ ಎಸಗಿರಬಹುದು, ಜೋತಪ್ಪ ದೇಹ ಶೇ.70ರಷ್ಟು ಭಾಗ ಸುಟ್ಟು ಕರಕಲಾಗಿತ್ತು ಎಂದು ಪೋಲಿಸರು ತಿಳಿಸಿದ್ದಾರೆ.
ಈ ಸಂಬಂಧ ಸೂರ್ಯನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Facebook Comments