ರೌಡಿಶೀಟರ್ ಬರ್ಬರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರಗಿ, ಏ.26-ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‍ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಬಬಲಾದ್ ಗ್ರಾಮದಲ್ಲಿ ನಡೆದಿದೆ. ಕಲಬುರಗಿ ನಗರದ ಕಾಂತ ಕಾಲೋನಿ ನಿವಾಸಿ ಆನಂದ್ ರಾಮಪೂರೆ(30) ಕೊಲೆಯಾಗಿರುವ ರೌಡಿಶೀಟರ್.

ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕಳೆದ ರಾತ್ರಿ ದುಷ್ಕರ್ಮಿಗಳು ಈತನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಆನಂದ್ ಕೊಲೆ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದ.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಗ್ರಾಮೀಣ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ