ವಾಕಿಂಗ್ ಹೋಗುತ್ತಿದ್ದವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು
ಬೆಳ್ತಂಗಡಿ, ಆ.24- ಇಲ್ಲಿನ ಜ್ಯೂನಿಯರ್ ಕಾಲೇಜ್ ರಸ್ತೆಯಲ್ಲಿ ಬೆಳಗ್ಗಿನ ಜಾವ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೋರ್ವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ ಘಟನೆ ಇಂದು ಬೆಳಗ್ಗೆ ನಡೆದಿದೆ.
ನಗರದ ಪಂಚಾಯತ್ ವ್ಯಾಪ್ತಿಯ ಜ್ಯೂನಿಯರ್ ಕಾಲೇಜ್ ರಸ್ತೆ ಬಳಿಯ ನಿವಾಸಿ ಹಿರಿಯ ಕಾರು ಚಾಲಕ ವಾಸು ಸಪಲ್ಯ (65) ಮೇಲೆ ದಾಳಿ ಆಗಿದ್ದು ಗಂಭೀರ ಗಾಯಗೊಂಡ ಇವರನ್ನು , ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಅದರೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ನಡೆದಿದೆ.
ವಾಸು ಸಪಲ್ಯ ಹಲವು ವರುಷಗಳಿಂದ ಬೆಳ್ತಂಗಡಿಯಲ್ಲಿ ಕಾರು ಚಾಲಕ ವೃತ್ತಿ ಮಾಡುತ್ತಿದ್ದ ಇವರು ತುಂಬಾ ಸೌಮ್ಯ ಸ್ವಭಾವದವರಾಗಿದ್ದರು.
ಘಟನೆ ನಡೆದ ಸ್ಥಳದಲ್ಲಿ ಕೃತ್ಯಕ್ಕೆ ಬಳಸಿದ ತಲವಾರ್ ಪತ್ತೆಯಾಗಿದೆ. ವಾಸು ಸಪಲ್ಯ ಅವರ ಎರಡನೇ ಮಗ ದಯಾನಂದ (38) ಈ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗುತ್ತಿದೆ.
ಮಗ ಕೂಡ ಚಾಲಕ ವೃತ್ತಿ ನಿರ್ವಹಿಸುತ್ತಿದ್ದು, ಮದ್ಯಪಾನ ಮಾಡಿ ತಂದೆ ಜೊತೆ ಗಲಾಟೆ ಮಾಡುತ್ತಿದ್ದು , ಈ ಬಗ್ಗೆ ಪ್ರಕರಣ ಪೆÇಲೀಸ್ ಠಾಣೆ ಮೆಟ್ಟಿಲೇರಿತ್ತು. ನಿನ್ನೆ ರಾತ್ರಿ ಮನೆಯಲ್ಲಿದ್ದ ಮಗ ದಯಾನಂದ ಇಂದು ಬೆಳಗ್ಗೆ ನಾಪತ್ತೆಯಾಗಿದ್ದು, ಮೊಬೈಲ್ ಸ್ವಿಚ್ ಆಫ್ ಬರುತ್ತಿರುವುದರಿಂದ ಅನುಮಾನ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್, ಸಬ್ ಇನ್ಸ್ಪೆಕ್ಟರ್ ನಂದಕುಮಾರ್ ಭೇಟಿ ನೀಡಿ ಪರೀಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.