ರುಂಡ, ಮುಂಡ ಕತ್ತರಿಸಿ ವ್ಯಕ್ತಿಯ ಬರ್ಬರ ಕೊಲೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.12- ಆವಲಹಳ್ಳಿ ಕೆರೆಯಲ್ಲಿ ತಲೆ, ಕೈಕಾಲುಗಳಿಲ್ಲದ ವ್ಯಕ್ತಿಯೊಬ್ಬರ ದೇಹ ಪತ್ತೆಯಾಗಿದೆ. ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಆವಲಹಳ್ಳಿ ಕೆರೆ ಬಳಿ ಇಂದು ಬೆಳಗ್ಗೆ ದೇಹವನ್ನು ಕಂಡು ದಾರಿಹೋಕರು ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ.  ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ವ್ಯಕ್ತಿಯ ತಲೆ, ಕೈಕಾಲುಗಳಿಲ್ಲದ ದೇಹ ಕಂಡುಬಂದಿದೆ. ದುಷ್ಕರ್ಮಿಗಳು ಈ ವ್ಯಕ್ತಿಯನ್ನು ಕೊಲೆ ಮಾಡಿ ತಲೆ ಮತ್ತು ಕೈಕಾಲುಗಳನ್ನು ಬೇರ್ಪಡಿಸಿ ದೇಹವನ್ನು ಗೋಣಿಚೀಲದಲ್ಲಿ ಸುತ್ತಿ ಕೆರೆಗೆ ಎಸೆದಿದ್ದಾರೆ.

ಕೊಲೆಯಾಗಿರುವ ವ್ಯಕ್ತಿ ಯಾರು, ಯಾವ ಕಾರಣಕ್ಕಾಗಿ ಇಷ್ಟೊಂದು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂಬ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಆವಲಹಳ್ಳಿ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook Comments