ದರೋಡೆಗೆ ಸಂಚು ರೂಪಿಸಿದ ಮೂವರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.24- ರಾತ್ರಿ ವೇಳೆ ಒಂಟಿಯಾಗಿ ಹೋಗುವ ಸಾರ್ವಜನಿಕರನ್ನು ಬೆದರಿಸಿ ಹಲ್ಲೆ ಮಾಡಿ ಹಣ-ಆಭರಣ ದೋಚಲು ಯತ್ನಿಸಿದ್ದ ಹಾಗೂ ಈ ಹಿಂದೆ ಜೈಲಿನಲ್ಲಿ ರೂಪಿಸಿದ್ದ ಸಂಚಿನಂತೆ ತನ್ನ ವಿರೋಧಿಯೊಬ್ಬನನ್ನು ಕೊಲೆ ಮಾಡಲು ಸಜ್ಜಾಗಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ (25), ಮೋಹನ್ (23), ರಾಹುಲ್ (19) ಬಂಧಿತರು.

ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶನಿ ಮಹಾತ್ಮ ದೇವಸ್ಥಾನ ಸಮೀಪ ರಾತ್ರಿ ಈ ಮೂವರು ದರೋಡೆಗೆ ಹೊಂಚು ಹಾಕುತ್ತಿದ್ದಾಗ ಇನ್ಸ್‍ಪೆಕ್ಟರ್ ಮತ್ತು ಸಿಬ್ಬಂದಿಗಳು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ವಿರುದ್ಧ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಇನ್ಸ್‍ಪೆಕ್ಟರ್ ಗಿರೀಶ್‍ನಾಯಕ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments