ತಂದೆಯಿಂದಲೇ ಮಗನ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.26- ಪ್ರತಿ ದಿನ ಕುಡಿದು ಬಂದು ಜಗಳವಾಡುತ್ತಿದ್ದ ಮಗನನ್ನು ತಂದೆಯೇ ಕೊಡಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಅಬ್ಬಿಗೆರೆಯ ಕರೇಕಲ್ ಗುಡ್ಡದ ನಿವಾಸಿ ಬಾಬರ್ (30) ಎಂಬಾತನೇ ತಂದೆಯಿಂದಲೇ ಕೊಲೆಯಾದ ಮಗ.

ಗಾರೆ ಕೆಲಸ ಮಾಡಿಕೊಂಡಿದ್ದ ಬಾಬರ್ ಪ್ರತಿ ದಿನ ಕುಡಿದು ಬಂದು ಮನೆಯಲ್ಲಿ ಜಗಳವಾಡುತ್ತಿದ್ದನು. ನಿನ್ನೆ ಕುಡಿಯಲು ಹಣ ಕೇಳಿದ್ದಾನೆ. ಹಣ ಕೊಡಲು ನಿರಾಕರಿಸಿದ ತಂದೆ ಹುಸೇನ್ ಮತ್ತು ತಾಯಿ ಜೊತೆ ಬಾಬರ್ ರಾತ್ರಿ 9.30ರ ಸುಮಾರಿನಲ್ಲಿ ಜಗಳವಾಡಿದ್ದಾನೆ. ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ಹೋದಾಗ ತಾಳ್ಮೆ ಕಳೆದುಕೊಂಡ ಹುಸೇನ್ ಮನೆಯಲ್ಲಿದ್ದ ಕೊಡಲಿಯಿಂದ ಮಗನ ತಲೆಗೆ ಹೊಡೆದಿದ್ದಾರೆ. ಆ ಸಂದರ್ಭದಲ್ಲಿ ಗಂಭೀರ ಗಾಯಗೊಂಡು ಬಾಬರ್ ಮೃತಪಟ್ಟಿದ್ದಾನೆ.

ಸುದ್ದಿ ತಿಳಿದು ಗಂಗಮ್ಮನ ಗುಡಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಹುಸೇನ್‍ನನ್ನು ವಶಕ್ಕೆ ಪಡೆದು ಶವವನ್ನು ಆಸ್ಪತ್ರೆಗೆ ಸಾಗಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments