ಬೈದಿದ್ದಕ್ಕೆ ಸ್ನೇಹಿತನ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.16- ತನಗೆ ಬೈದನೆಂಬ ಕಾರಣಕ್ಕೆ ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಕೆ.ಜಿ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ವೆಂಕಟೇಶ್ವರ ಲೇಔಟ್ ನಿವಾಸಿ ಫರಾನ್ (26) ಕೊಲೆಯಾದ ಯುವಕ. ಚಿಕನ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪರಾನ್ ರಾತ್ರಿ 10 ಗಂಟೆಯ ಸಮಯದಲ್ಲಿ ಕ್ಷುಲ್ಲಕ ವಿಚಾರವಾಗಿ ಸ್ನೇಹಿತನ ಜತೆ ಜಗಳವಾಗಿದೆ.

ಆ ಸಂದರ್ಭದಲ್ಲಿ ಫರಾನ್ ಬೈದಿದ್ದಾನೆ. ಇದೇ ಕೋಪಕ್ಕೆ ಆರೋಪಿ ಚಾಕುವಿನಿಂದ ಫರಾನ್ ಕುತ್ತಿಗೆಗೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸುದ್ದಿ ತಿಳಿದ ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

Facebook Comments