ಕತ್ತು ಸೀಳಿ ವ್ಯಕ್ತಿಯ ಬರ್ಬರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 22- ವ್ಯಕ್ತಿಯೊಬ್ಬನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಾಜಿನಗರದ ನಿವಾಸಿ ಸಯ್ಯದ್ ಆಲಿ (35) ಕೊಲೆಯಾಗಿರುವ ವ್ಯಕ್ತಿ.

ಈತನನ್ನು ದುಷ್ಕರ್ಮಿಗಳು ಶಾಂಪುರ ರೈಲ್ವೆ ಹಳಿ ಸಮೀಪದ ಖಾಲಿ ಜಾಗಕ್ಕೆ ಕರೆದುಕೊಂಡು ಹೋಗಿ ಜಗಳ ತೆಗೆದು ಕುತ್ತಿಗೆಯನ್ನು ಚಾಕುವಿನಿಂದ ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಆತನ ಮನೆಯವರು ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ. ಇಂದು ಮಧ್ಯಾಹ್ನ ಸಾರ್ವಜನಿಕರು ಶಾಂಪುರ ಖಾಲಿ ಜಾಗದಲ್ಲಿರುವ ಶವ ನೋಡಿ ಪೊಲೀಸರಿಗೆ ತಿಳಿಸಿದ್ದಾರೆ.

ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಗೋವಿಂದಪುರ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook Comments

Sri Raghav

Admin