ಪಾದಯಾತ್ರೆ ಕೈಬಿಡುವಂತೆ ಪಂಚಮಸಾಲಿ ಸಮುದಾಯಕ್ಕೆ ನಿರಾಣಿ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.13- ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಬಸವ ಕಲ್ಯಾಣದಿಂದ ನಾಳೆ ಕೈಗೊಳ್ಳಲು ಉದ್ದೇಶಿಸಿದ್ದ ಪಾದಯಾತ್ರೆಯನ್ನು ಬಸವಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರು ಕೈಬಿಡಬೇಕೆಂದು ಸಂಭಾವ್ಯ ಸಚಿವ ಮುರುಗೇಶ್ ನಿರಾಣಿ ಮನವಿ ಮಾಡಿದ್ದಾರೆ. ಪಂಚಮಸಾಲಿ ಸಮುದಾಯದ ಸಮಸ್ಯೆಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಆಲಿಸಿರುವುದರಿಂದ ಪಾದಯಾತ್ರೆ ಕೈಬಿಡುವಂತೆ ಶ್ರೀಗಳಿಗೆ ಮನವಿ ಮಾಡಿರುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದರು.

ಸಚಿವರಾಗಿ ಸೇವೆ ಸಲ್ಲಿಸಲು ಮುಖ್ಯಮಂತ್ರಿಯವರು ತಮ್ಮ ಸಂಪುಟದಲ್ಲಿ ಅವಕಾಶ ಮಾಡಿಕೊಟ್ಟಿರುವುದಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಯಾವುದೇ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುವೆ. ಈ ಹಿಂದೆ ಸಚಿವರಾಗಿ ಕೆಲಸ ಮಾಡಿರುವ ಅನುಭವವಿದ್ದು, ನಾಡಿನ ಜನರ ಸೇವೆಗೆ ಸದಾ ಸಿದ್ಧ ಎಂದು ಹೇಳಿದರು. ಕಳೆದ ಮೂರು ದಶಕಗಳಿಂದಲೂ ಬಿಜೆಪಿ ಕಾರ್ಯಕರ್ತನಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತ ಬಂದಿದ್ದೇನೆ ಎಂದರು.

Facebook Comments