ಶಂಕರಾಚಾರ್ಯರ ಪ್ರತಿಮೆ ಮೇಲೆ ಧ್ವಜ ಹಾರಿಸಿದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.14- ಇತಿಹಾಸ ಪ್ರಸಿದ್ದ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯ ಆದಿಗುರು ಶಂಕರಾಚಾರ್ಯರ ಪ್ರತಿಮೆ ಮೇಲೆ ಧ್ವಜ ಹಾರಿಸಿರುವ ಕೆಲ ಕಿಡಿಗೇಡಿಗಳನ್ನು ತಕ್ಷಣವೇ ಬಂಸಿ ಕಾನೂನು ಕ್ರಮ ಜರುಗಿಸಬೇಕೆಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸರ್ಕಾರಕ್ಕೆ ಆಗ್ರಹಿಸಿದೆ.

ಈ ಸಂಬಂಧ ಇಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಎಚ್.ಸಚ್ಚಿದಾನಂದಮೂರ್ತಿ ಮತ್ತಿತರರು ಗೃಹಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಪತ್ರ ಸಲ್ಲಿಸಿದರು.

ಶೃಂಗೇರಿ ಪಟ್ಟಣದ ಶ್ರೀ ಶಂಕರಾಚಾರ್ಯ ವೃತ್ತದಲ್ಲಿ ಜಗದ್ಗುರು ಶ್ರೀ ಆದಿಶಂಕರಾಚಾರ್ಯ ಪುತ್ಥಳಿಯ ಮೇಲೆ ಎಸ್‍ಡಿಪಿಐ ಧ್ವಜ ಹಾರಿಸಿ ಮಠದ ಗೌರವಕ್ಕೆ ಧಕ್ಕೆಯಾಗಿದ್ದಲ್ಲದೆ, ನಾಡಿನ ಲಕ್ಷಾಂತರ ಭಕ್ತರ ಭಾವನೆಗಳಿಗೆ ಅಗೌರವ ತೋರಿದ್ದಾರೆ. ಕೂಡಲೇ ತಪ್ಪಿತಸ್ಥರನ್ನು ಬಂಸಿ ಕಠಿಣ ಶಿಕ್ಷೆ ನೀಡಬೇಕೆಂಬು ಮನವಿ ಮಾಡಿದರು.

ನಂತರ ಮಾತನಾಡಿದ ಸಚ್ಚಿದಾನಂದ ಮೂರ್ತಿ, ಶಂಕರಾಚಾರ್ಯರ ಪ್ರತಿಮೆಯನ್ನು ವಿರೂಪಗೊಳಿಸಲು ಕಾರಣರಾಗಿರುವ ಎಸ್‍ಡಿಪಿಐನ ದುಷ್ಟ ಶಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನುಕ್ರಮ ಜರುಗಿಸಲೇಬೇಕು. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ಮೇಲೆ ಧಾರ್ಮಿಕ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿರುವುದು ಹಾಗೂ ದೇಶದ್ರೋಹದಡಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು.

ಶೃಂಗೇರಿ ಮಠಕ್ಕೆ ದೇಶವಿದೇಶಗಳಿಂದ ಪ್ರತಿದಿನ ಸಾವಿರಾರು ಜನರು ಆಗಮಿಸುತ್ತಾರೆ. ಶ್ರದ್ದಾಭಾವ ಭಕ್ತಿಯಿಂದ ನಡೆದುಕೊಳ್ಳುತ್ತಾರೆ. ಇಂತಹ ಪವಿತ್ರ ಸ್ಥಳದಲ್ಲಿ ಹೀನಕೃತ್ಯ ನಡೆಸಿ ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

Facebook Comments

Sri Raghav

Admin