ಪೌರತ್ವ ಕಾಯ್ದೆ ವಿರೋಧಿಸಿ ಮುಸ್ಲಿಮರ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಕೆ.ಆರ್.ಪುರ,ಡಿ.14- ಕೇಂದ್ರ ಸರಕಾರ ಜಾರಿಗೆ ತರಲು ಮುಂದಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನ ವಿರೋಧಿಯಾಗಿದ್ದು. ಕೂಡಲೇ ಇದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕೆ.ಆರ್.ಪುರಂನ ಮುಸ್ಲಿಮರು ವಿಜಿನಾಪುರದ ಎಫ್‍ಸಿಐ ಗೊಡೌನ್ ಬಳಿ ಪ್ರತಿಭಟನೆ ನಡೆಸಿದರು. ಬಿಜೆಪಿ ಮುಸಲ್ಮಾನರನ್ನು ಗುರಿಯಾಗಿಸಿಕೊಂಡು ಪೌರತ್ವ ಮಸೂದೆ ಜಾರಿಗೆ ತಂದಿದೆ. ಸಂವಿಧಾನ ವಿರೋಧಿ ಕ್ರಮವನ್ನು ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಮಸೂದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಜಾಮಿಯ ಮಜಿದ್ ಅಧ್ಯಕ್ಷ ಎಂ.ಸಯ್ಯದ್ ಅಯುಬ್ ಮಾತನಾಡಿ, ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದಿಂದ ಬಂದು ಅಕ್ರಮವಾಗಿ ನೆಲೆಸಿರುವ ಸಿಖ್, ಬೌದ್ಧ, ಜೈನ್ ಹಾಗೂ ಪಾರ್ಸಿಗಳಿಗೆ ಭಾರತದ ಪೌರತ್ವ ನೀಡಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಮುಸ್ಲಿಮರನ್ನು ಉದ್ದೇಶ ಪೂರ್ವಕವಾಗಿ ಕೈ ಬಿಡಲಾಗಿದೆ. ಧರ್ಮದ ಆಧಾರದಲ್ಲಿ ದೇಶವನ್ನು ವಿಭಜಿಸಲು ಮುಂದಾಗುತ್ತಿರುವ ಕೇಂದ್ರದ ನಡೆ ಖಂಡನೀಯ ಎಂದರು.

ಕೆ.ಆರ್.ಪುರದ ಮುಸ್ಲಿಂ ಸಮುದಾಯದ ಮುಖಂಡ ಸುಲ್ತಾನ್ ಮಿಜರ್, ಧರ್ಮದ ಆಧಾರದಲ್ಲಿ ಪೌರತ್ವ ನೀಡಲು ಮುಂದಾಗುವ ಮೂಲಕ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರು, ಸಂವಿಧಾನದ ಕಲಂ 14, 15 ಹಾಗೂ 21 ಅನ್ನು ಉಲ್ಲಂಘಿಸಿದ್ದಾರೆ. ಇದನ್ನು ಕೇವಲ ಮುಸ್ಲಿಮರಷ್ಟೇ ಅಲ್ಲದೆ, ಜಾತ್ಯತೀತ ಮನೋಭಾವನೆ ಹೊಂದಿರುವ ಪ್ರತಿಯೊಬ್ಬ ಭಾರತೀಯನೂ ಖಂಡಿಸಬೇಕು. ಆ ಮೂಲಕ ಸಂವಿಧಾನದ ಶ್ರೇಷ್ಠತೆಯನ್ನು ಎತ್ತಿ ಹಿಡಿಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Facebook Comments