‘ಕಾಲ’ ಚಿತ್ರ ರಿಲೀಸ್ ಬಗ್ಗೆ ಮುಖ್ಯಮಂತ್ರಿ ಚಂದ್ರು ಹೇಳಿದ್ದೇನು..?

ಈ ಸುದ್ದಿಯನ್ನು ಶೇರ್ ಮಾಡಿ

Mukhyamantri-Chandru--02

ತುಮಕೂರು, ಜೂ.5- ಕಾಲ ಚಿತ್ರ ಬಿಡುಗಡೆ ಸಂಬಂಧ ನಟ ಪ್ರಕಾಶ್ ರೈ ನೀಡಿರುವ ಹೇಳಿಕೆಯಿಂದ ಕನ್ನಡಿಗರಿಗೆ ಅವಮಾನವಾಗಿದೆ ಎಂದು ಚಲನಚಿತ್ರ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮಪ್ಪ ಪರ ಪ್ರಚಾರ ನಡೆಸಲು ಬಂದಿದ್ದ ಅವರು ಸುದ್ದಿಗೋಷ್ಠಿ ನಡೆಸಿ ರಜಿನಿಕಾಂತ್ ನಟಿಸಿರುವ ಕಾಲ ಚಲನಚಿತ್ರ ಬಿಡುಗಡೆ ಸಂಬಂಧ ಕನ್ನಡಿಗರು ಮತ್ತು ಕಾವೇರಿ ವಿಷಯವನ್ನು ಮದುವೆ ಮನೆಯ ಬಾಚಣಿಗೆಗೆ ಪ್ರಕಾಶ ರೈ ಹೊಲಿಸಿದ್ದಾರೆ. ಇದು ಸರಿಯಲ್ಲ ಎಂದು ಹೇಳಿದರು.

ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ಬಾಯಿಗೆ ಬಂದಂತೆ ಪದಬಳಕೆ ಮಾಡುತ್ತಾರೆ. ಅದೇ ರೀತಿ ಪ್ರಕಾಶ್‍ರೈ ಕೂಡಾ ಮನಬಂದಂತೆ ಮಾತನಾಡುತ್ತಿದ್ದಾರೆ. ಈ ಮೂಲಕ ಸಂಸ್ಕಾರ ಕಳೆದುಕೊಳ್ಳುತ್ತಿದ್ದಾರೆ ಎಂದರು. ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಳ್ಳಾಪುರ ಜಿಲ್ಲೆಗಳಲ್ಲಿ ನಾನು ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮಪ್ಪ ಅವರ ಪರ ಪ್ರಚಾರ ಕೈಗೊಂಡಿದ್ದೇನೆ. ಶಿಕ್ಷಕರ ಬಗ್ಗೆ ಅಪಾರ ಕಾಳಜಿ ಹೊಂದಿರುವ ರಾಮಪ್ಪ, ಸಮಸ್ಯೆ ಬಗೆಹರಿಸಲು ಹಲವು ಯೋಜನೆಗಳನ್ನು ರೂಪಿಸಿಕೊಂಡಿದ್ದಾರೆ. ಹಾಗಾಗಿ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿಯವರು ಶಿಕ್ಷಕರ ಕ್ಷೇತ್ರದಲ್ಲೂ ಸ್ಪರ್ಧಿಸಿದ್ದು ಮುಂಬರುವ ಲೋಕಸಭಾ ಚುನಾವಣೆಗೂ ಸ್ಪರ್ಧೆ ಬಯಸಿದ್ದಾರೆ. ಹಾಗಾಗಿ ಅವರನ್ನು ನಂಬಬೇಡಿ. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಕೋರಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆಂಚಮಾರಯ್ಯ ಮತ್ತಿತರರು ಹಾಜರಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin