ಮೋದಿ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಸೆ.17- ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಇಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದು ಸಚಿವ ಸೋಮಣ್ಣ ತಿಳಿಸಿದರು.
ನಮ್ಮ ಸಂಪ್ರದಾಯದಂತೆ ಪ್ರಧಾನಿ ಅವರಿಗೆ ಶುಭ ಕೋರಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲಾಗಿದೆ.

ದಸರಾ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾಮಗಾರಿ ವೀಕ್ಷಿಸಲು ಆಗಮಿಸಿದ್ದ ವೇಳೆ ಪ್ರಧಾನಿ ಹೆಸರಿನಲ್ಲಿ ಪೂಜೆ ಮಾಡಿಸಲಾಗಿದೆ ಎಂದು ಹೇಳಿದರು. ಈ ಬಾರಿಯ ಮೈಸೂರು ದಸರಾ ಸೆ.29ರಂದು ಉದ್ಘಾಟನೆಯಾಗಲಿದೆ. ಸೆ.26ರೊಳಗೆ ಎಲ್ಲ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಅಂಗಡಿ ತೆರವಾದವರಿಗೆ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ. ಆ ತಾಯಿ ಯಾರನ್ನೂ ಕೈ ಬಿಡಲ್ಲ. ಆ ತಾಯಿಯನ್ನು ನಂಬಿದವರನ್ನು ನಾವು ಕೈ ಬಿಡುವುದಿಲ್ಲ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಲ್ಟಿ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಸಚಿವರು ಭೇಟಿ ನೀಡಿ ಪರಿಶೀಲಿಸಿದರು.

Facebook Comments