ಚಾಮುಂಡಿ ಬೆಟ್ಟದಲ್ಲಿ ಮದ್ಯ ಸೇವಿಸಿ ಯುವಕರ ಅವಾಂತರ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಸೆ.30-ಚಾಮುಂಡಿ ಬೆಟ್ಟದಲ್ಲಿ ರಾತ್ರಿ ಇಬ್ಬರು ಯುವಕರ ನಡುವೆ ಮಾರಾಮಾರಿ ನಡೆದಿದ್ದು, ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿತ್ತು. ಮದ್ಯಪಾನ ಮಾಡಿ ಬಂದಿದ್ದ 10ಕ್ಕೂ ಹೆಚ್ಚು ಮಂದಿ ಯುವಕರು ಬೈಕ್‍ಗಳಲ್ಲಿ ನಿನ್ನೆ ರಾತ್ರಿ ಚಾಮುಂಡಿ ಬೆಟ್ಟಕ್ಕೆ ಬಂದಿದ್ದರು.

ಈ ಗುಂಪಿನಲ್ಲಿದ್ದ ಇಬ್ಬರ ನಡುವೆ ಜಗಳ ಉಂಟಾಗಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಒಬ್ಬಾತ ಬೈಕ್‍ನ್ನು ಸುಡುಲು ಮುಂದಾಗಿದ್ದಾನೆ. ಇದನ್ನು ಕಂಡ ಸಾರ್ವಜನಿಕರು ಆತಂಕಗೊಂಡಿದ್ದರು. ತಕ್ಷಣ ಅಲ್ಲೇ ಇದ್ದ ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Facebook Comments