ಮೈಸೂರಿನಲ್ಲಿ 144 ಸೆಕ್ಷನ್ ಜಾರಿ, ಬಿಗಿಬಂದೋಬಸ್ತ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.19- ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೆಲವು ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿದ್ದರ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇಂದಿನಿಂದ ಮೂರು ದಿನಗಳ ಕಾಲ 144 ಸೆಕ್ಷನ್ ಜಾರಿಯಾದ ಹಿನ್ನೆಲೆಯಲ್ಲಿ ಪ್ರತಿಭಟನೆ ವಾಪಸ್ ಪಡೆಯಲಾಗಿದ್ದರೂ ಸಹ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ನಗರದ ಪುರಭವನ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.  ಆಯಾಕಟ್ಟಿನ ಪ್ರದೇಶಗಳಲ್ಲಿ ಬೆಳಗಿನಿಂದಲೇ ಪೊಲೀಸರು ಪಹರೆ ನಡೆಸುತ್ತಿದ್ದಾರೆ. ಸಭೆ ಸಮಾರಂಭಗಳು ರದ್ದುಗೊಂಡಿವೆ. 21ರ ಮಧ್ಯರಾತ್ರಿವರೆಗೂ ನಗರದಲ್ಲಿ ನಿಷೇಧಾಜ್ಞೆ ಇರಲಿದೆ.

Facebook Comments