ಮೈಸೂರಿನಲ್ಲಿ ಸಂಜೆ 6ರಿಂದ ಬೆಳಗ್ಗೆ 5ರವರೆಗೆ ಕಫ್ರ್ಯೂ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಜು.3- ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ನಗರದಾದ್ಯಂತ ಇಂದಿನಿಂದ ಪ್ರತಿ ದಿನ ಸಂಜೆ 6 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕಫ್ರ್ಯೂ ಜಾರಿಯಲ್ಲಿರುತ್ತದೆ ಎಂದು ನಗರ ಪೆÇಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.

ಕಫ್ರ್ಯೂ ಅವಧಿಯಲ್ಲಿ ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ಸಾರ್ವಜನಿಕರ ಸಂಚಾರವನ್ನು ನಿಷೇಧಿಸಲಾಗಿದೆ. ಒಂದು ವೇಳೆ ಉಲ್ಲಂಘನೆ ಕಂಡುಬಂದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಮುಂದಿನ ಆದೇಶದವರೆಗೂ ಕಫ್ರ್ಯೂ ಜಾರಿಯಲ್ಲಿದ್ದು ಈ ಆದೇಶ ವೈದ್ಯಕೀಯ ಸೇವೆಗಳು, ಸರಕು ಸಾಗಾಣೆ, ಅಗತ್ಯ ಸೇವೆಗಳ ಪಾಸ್ ಹೊಂದಿರುವವರು ಸರ್ಕಾರಿ ವಾಹನಗಳು, ಆಹಾರ ಪದಾರ್ಥ ವಿತರಕರಿಗೆ ಅನ್ವಯಿಸುವುದಿಲ್ಲ. ಆದರೆ 9 ಗಂಟೆವರೆಗೆ ಮಾತ್ರ ಸಂಚರಿಸಲು ಅವಕಾಶವಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Facebook Comments