ಈ ಬಾರಿಯ ದಸರಾ ಉದ್ಘಾಟಿಸಲಿದ್ದಾರೆ ಕೊರೋನಾ ವಾರಿಯರ್ಸ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.8- ಈ ಬಾರಿಯ ನಾಡ ಹಬ್ಬ ಮೈಸೂರು ದಸರಾ ಉದ್ಘಾಟನೆಯನ್ನು ಕೋವಿಡ್-19 ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸಿದ ಐದು ಮಂದಿ ವಾರಿಯರ್ರ್ಸ್‍ಗಳಿಂದ ನೆರವೇರಿಸಲು ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ದಸರಾ ಮಹೋತ್ಸವದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಈ ಬಾರಿಯ ದಸರಾವನ್ನು ಕೋವಿಡ್-19 ನಿಯಂತ್ರಣಕ್ಕಾಗಿ ಶ್ರಮಿಸಿದ ವೈದ್ಯರು, ನರ್ಸ್, ಆಶಾಕಾರ್ಯಕರ್ತೆಯರು, ಪೌರಕಾರ್ಮಿಕರು ಹಾಗೂ ಪೊಲೀಸರಿಂದ ನೆರವೇರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ತಿಳಿಸಿದರು.

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಧ್ಯುಕ್ತವಾಗಿ ಪೂಜೆ ನೆರವೇರಿಸಿ ಐದರಿಂದ ಆರು ಆನೆಳುಳ್ಳ ಜಂಬೂಸವಾರಿಗೆ ಅವಕಾಶ ನೀಡಲಾಗುವುದು ಎಂದರು. ಎಲ್ಲಾ ಸಾಂಸ್ಕøತಿಕ ಕಾರ್ಯಕ್ರಮಗಳು ಅರಮನೆ ಮೈದಾನ ಮತ್ತು ಚಾಮುಂಡಿ ಬೆಟ್ಟಕ್ಕೆ ಸೀಮಿತವಾಗಲಿವೆ.

ವಿದ್ಯುತ್ ದೀಪಾಲಂಕಾರ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಆತ್ಮನಿರ್ಭರ ಭಾರತ್ ಪರಿಕಲ್ಪನೆಯಂತೆ ಚೀನಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡದೆ ದೇಶೀಯ ಉತ್ಪನ್ನಗಳ ಮಾರಾಟಕ್ಕೆ ಆದ್ಯತೆ ನೀಡಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದರು.

Facebook Comments