ಮರ್ಡರ್ ಪಾರ್ಟಿ ಆಯ್ತು ಬರ್ತ್ ಡೇ ಪಾರ್ಟಿ..! ಮೈಸೂರಿನಲ್ಲಿ ಬಿಜೆಪಿ ನಾಯಕನ ಭೀಕರ ಹತ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಫೆ.6- ನಗರದಲ್ಲಿ ಬಿಜೆಪಿ ಮುಖಂಡನ ಹತ್ಯೆ ಇಂದು ಬೆಳಗಿನ ಜಾವ ನಡೆದಿದೆ. ಬಿಜೆಪಿ ಮುಖಂಡ ಆನಂದ ಅಲಿಯಾಸ್ ವಡ್ಡ ಆನಂದ ಕೊಲೆಗೀಡಾದ ವ್ಯಕ್ತಿ. ಈತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆಯಾದ ಆನಂದ ರೌಡಿ ಶೀಟರ್ ಆಗಿದ್ದು, ಸರಸ್ವತಿಪುರಂ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ.

ಈ ಹಿಂದೆ ಜನತಾ ನಗರದ ಮಾರುತಿ ಟೆಂಟ್ ರಸ್ತೆಯಲ್ಲಿ ಕುಮಾರಸ್ವಾಮಿ ಎಂಬಾತನನ್ನು ಈ ಆನಂದ ಕೊಲೆ ಮಾಡಿ ಜೈಲು ಶಿಕ್ಷೆ ಅನುಭವಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ಹುಟ್ಟುಹಬ್ಬ ನಿನ್ನೆ ಇತ್ತು. ಬರ್ತ್‍ಡೇ ಪಾರ್ಟಿಯಲ್ಲಿಯೇ ಈತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕುವೆಂಪುನಗರದ ಲವಕುಶ ಪಾರ್ಕ್ ಬಳಿಯ ಸರ್ವೀಸ್ ಅಪಾರ್ಟ್‍ಮೆಂಟ್‍ನಲ್ಲಿ ಹುಟ್ಟುಹಬ್ಬದ ಪಾರ್ಟಿ ಸಂದರ್ಭದಲ್ಲೇ ಕೊಲೆ ಮಾಡಿದ್ದಾರೆ.

ಪಾರ್ಟಿಯಲ್ಲಿ ಸ್ನೇಹಿತರ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದ್ದು, ಈ ಸಂದರ್ಭದಲ್ಲಿ ಜಗಳ ವಿಕೋಪಕ್ಕೆ ತಿರುಗಿ ಬಿಯರ್ ಬಾಟಲ್‍ನಿಂದ ಮನಸೋ ಇಚ್ಛೆ ಇರಿದು ಹತ್ಯೆ ಮಾಡಿದ್ದಾರೆ ಎಂದಿದ್ದಾರೆ. ಕುವೆಂಪು ನಗರ ಠಾಣೆ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಈ ಪ್ರಕರಣಕ್ಕೂ ಮುನ್ನ ಆನಂದ ಉತ್ತನಹಳ್ಳಿ ಸಮೀಪದ ಖಾಸಗಿ ಕಲ್ಯಾಣ ಮಂಟಪವೊಂದರಲ್ಲಿ ಪಾರ್ಟಿ ಮುಗಿಸಿ ಬಂದಿದ್ದ ಎನ್ನಲಾಗಿದೆ.

ಅನಂತರ ಸ್ನೇಹಿತರೊಂದಿಗೆ ಅಪಾರ್ಟ್‍ಮೆಂಟ್‍ನಲ್ಲಿ ಪಾರ್ಟಿ ನಡೆಸಿದಾಗ ಈ ಘಟನೆ ನಡೆದಿದೆ.ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಆನಂದ ರಿಯಲ್ ಎಸ್ಟೇಟ್ ಮತ್ತು ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ.

Facebook Comments