ಮೈಸೂರಿನ ಹಲವು ಏರಿಯಾಗಳು ಕಂಪ್ಲೀಟ್ ಸೀಲ್‍ಡೌನ್

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಜೂ.22- ಕೋವಿಡ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳನ್ನು ಸೀಲ್‍ಡೌನ್ ಮಾಡಲಾಗಿದೆ. ಜನರು ಕೊರೊನಾ ಸೋಂಕಿನಿಂದ ತಲ್ಲಣಗೊಂಡಿದ್ದು , ಜಿಲ್ಲಾಡಳಿತ ಮುನ್ನೆಚ್ಚರಿಕೆ ಕೈಗೊಂಡು ನಗರದ ಕೆಲ ಪ್ರದೇಶಗಳನ್ನು ಸೀಲ್‍ಡೌನ್ ಮಾಡಿದೆ.

ನಗರದ ಕೃಷ್ಣವಿಲಾಸ ರಸ್ತೆ, ಶ್ರೀರಾಮಪುರ, ವಿವಿ ಮೊಹಲ್ಲಾ ಹಿಣಕಲ್‍ನ ಬೆಮೆಲ್ ಬಡಾವಣೆ, ಮೈಸೂರು ತಾಲ್ಲೂಕಿನ ರಮ್ಮನಹಳ್ಳಿ, ಟಿ.ನರಸೀಪುರ ತಾಲ್ಲೂಕಿನ ಎಸ್.ಕೆ.ಅಗ್ರಹಾರ, ಅಂಕನಹಳ್ಳಿ, ನಂಜನಗೂಡು ತಾಲ್ಲೂಕಿನ ಹುರಾ ಗ್ರಾಮದಲ್ಲಿ ಸೋಂಕು ಕಂಡು ಬಂದಿರುವ ಹಿನ್ನೆಲೆಯಲ್ಲಿ ಸೀಲ್‍ಡೌನ್ ಮಾಡಲಾಗಿದೆ.

ಇದಲ್ಲದೆ ಹೊಸದಾಗಿ 9 ಪ್ರದೇಶಗಳನ್ನು ಕಂಟೋನ್ಮೆಂಟ್ ಜೋನ್ ಎಂದು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ ಶಂಕರ್ ತಿಳಿಸಿದ್ದಾರೆ.

ಕೊರೊನಾ ಹರಡದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಉಸಿರಾಟದ ಸಮಸ್ಯೆ ತಲೆನೋವು, ಜ್ವರ ಕಂಡು ಬಂದಲ್ಲಿ ತಕ್ಷಣವವೇ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ತಪಾಸಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ಅವರು ಸೂಚನೆ ನೀಡಿದ್ದಾರೆ.

Facebook Comments