ಮೈಸೂರು ಶೂಟೌಟ್ ಪ್ರಕರಣ, ಇನ್ಸ್ಪೆಕ್ಟರ್ ಎತ್ತಂಗಡಿ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಮೇ 19- ನಗರದಲ್ಲಿ ನಡೆದಿದ್ದ ಶೂಟೌಟ್ ಪ್ರಕರಣದ ಹಿನ್ನೆಲೆಯಲ್ಲಿ ವಿಜಯನಗರ ಠಾಣೆ ಇನ್ಸ್ಪೆಕ್ಟರ್ ಬಿ.ಜಿ.ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಸರ್ಕಾರ ಕುಮಾರ ಅವರ ವರ್ಗಾವಣೆ ಆದೇಶವನ್ನು ನಿನ್ನೆ ಸಂಜೆ ಹೊರಡಿಸಿದೆ. ಕುಮಾರ್ ಅವರನ್ನು ಬೆಂಗಳೂರಿನ ಸೆಂಟ್ರಲ್ ಐಜಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

ಶೀಘ್ರವಾಗಿ ವರದಿ ಮಾಡಿಕೊಳ್ಳುವಂತೆ ಕುಮಾರ್ ಅವರಿಗೆ ಸೂಚಿಸಲಾಗಿದೆ. ನಗರದಲ್ಲಿ ನಡೆದಿದ್ದ ಶೂಟೌಟ್ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿರುವುದರಿಂದ ವಿಚಾರಣೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯಬೇಕೆಂಬ ಹಿನ್ನೆಲೆಯಲ್ಲಿ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ನಗರದಲ್ಲಿ ಹಳೆನೋಟುಗಳ ಬದಲಾವಣೆ ಬಗ್ಗೆ ಮಾಹಿತಿ ಪಡೆದ ವಿಜಯನಗರ ಪೊಲೀಸರು ದಂಧೆಕೋರರನ್ನು ಬಂಧಿಸಲು ಹೋದಾಗ, ಸುಖ್ವೇಂದರ್ ಸಿಂಗ್ ತನ್ನ ಬಳಿ ಇದ್ದ ಪೊಲೀಸರ ಮೇಲೆ ಗುಂಡಿನ ದಾಳಿಗೆ ಮುಂದಾಗಿದ್ದನು.

ಆ ಸಂದರ್ಭದಲ್ಲಿ ವಿಜಯನಗರ ಠಾಣೆ ಇನ್‍ಸ್ಪೆಕ್ಟರ್ ಆತ್ಮರಕ್ಷಣೆಗಾಗಿ ಹಾರಿಸಿದ ಗುಂಡು ಸುಖ್ವೇಂದರ್ ಸಿಂಗ್‍ಗೆ ತಗುಲಿ ಸಾವನ್ನಪ್ಪಿದ್ದ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin