ಅ.2ರಂದು ದಸರಾ ಗಜಪಡೆಗೆ ಸ್ವಾಗತ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಸೆ.20-ಮೈಸೂರು ಅರಮನೆ ಆವರಣದಲ್ಲಿ ಅಕ್ಟೋಬರ್ 2ರಂದು ಗಜಪಡೆಗೆ ಸ್ವಾಗತ ಕಾರ್ಯಕ್ರಮ ಆಯೋಜಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ದಸರಾ ಉತ್ಸವವನ್ನು ಯಾವುದೇ ಸಾಂಸ್ಕøತಿಕ ಕಾರ್ಯಕ್ರಮಗಳಿಲ್ಲದೆ ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ವೀರ ಹೊಸಹಳ್ಳಿಯಲ್ಲಿ ಕಾರ್ಯಕ್ರಮ ಆಯೋಜಿಸದೆ ಅರಮನೆ ಆವರಣದಲ್ಲೇ ಗಜಪಡೆಗೆ ಸ್ವಾಗತ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸರಳ ದಸರಾ ಹಿನ್ನೆಲೆಯಲ್ಲಿ 5 ಉಪ ಸಮಿತಿಗಳನ್ನು ರಚಿಸಲಾಗಿದೆ.

ಸ್ವಾಗತ ಮತ್ತು ಆಮಂತ್ರಣ ಸಮಿತಿ, ಮೆರವಣಿಗೆ, ಸಾಂಸ್ಕøತಿಕ, ದೀಪಾಲಂಕಾರ, ಸ್ವಚ್ಛತೆ ಹಾಗೂ ವ್ಯವಸ್ಥೆ ಸಮಿತಿಗಳನ್ನು ರಚಿಸಲಾಗಿದೆ. ಈ ಸಮಿತಿಗಳು ಸರಳ ದಸರಾ ಆಚರಣೆಗೆ ಕಾರ್ಯ ನಿರ್ವಹಿಸಲಿದೆ.

ಈಗಾಗಲೇ ದಸರಾ ನಾಡಹಬ್ಬವನ್ನು ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸ ಲಾಗಿದೆ. ಕೊರೊನಾ ಸಂದರ್ಭದಲ್ಲಿ ಪ್ರವಾಸಿಗರು ಮೈಸೂರು ಭೇಟಿ ನೀಡಿದರೂ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರೂ ಜಿಲ್ಲಾಡಳಿತದ ವತಿಯಿಂದ ಕೆಲವೊಂದು ಮಾರ್ಗಸೂಚನೆಗಳನ್ನು ಕೂಡ ಬಿಡುಗಡೆ ಮಾಡಲಾಗುತ್ತಿದೆ.

Facebook Comments