ತನ್ನನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಡ್ರಾಮಾ ಮಾಡಿ ಸಿಕ್ಕಿಬಿದ್ದ ಬಂಗಾಳಿ ಭೂಪ..!

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಜೂ.13- ಬ್ಯಾಂಕಿಂಗ್ ಪರೀಕ್ಷೆಗೆಂದು ಬಂದಿದ್ದ ಪಶ್ಚಿಮ ಬಂಗಾಳ ಮೂಲದ ಯುವಕನೊಬ್ಬ ತನ್ನನ್ನು 50 ಲಕ್ಷ ಹಣಕ್ಕಾಗಿ ಕಿಡ್ನಾಪ್ ಮಾಡಿದ್ದಾರೆ ಎಂದು ನಾಟಕವಾಡಿ ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.  ಪಶ್ಚಿಮ ಬಂಗಾಳ ಮೂಲದ ಶೋಭಿತ್ ಹಿನಾ ಪೊಲೀಸರಿಗೆ ಸಿಕ್ಕಿಬಿದ್ದಿರುವ ಯುವಕ.

ಬ್ಯಾಂಕಿಂಗ್ ಪರೀಕ್ಷೆಗೆಂದು ಪಶ್ಚಿಮ ಬಂಗಾಳದಿಂದ ಬಂದಿದ್ದ ಈತ ತದನಂತರ ವಾಪಸ್ ಊರಿಗೆ ಹಿಂದಿರುಗದೆ ಬೇರೆಯವರ ಮೊಬೈಲ್‍ನಿಂದ ತನ್ನ ತಾಯಿಗೆ ಕರೆ ಮಾಡಿ ನನ್ನನ್ನು ಅಪಹರಿಸಲಾಗಿದೆ. 50 ಲಕ್ಷ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾನೆ.

ಇದರಿಂದ ಹೆದರಿದ ಫೋಷಕರು ತಕ್ಷಣ ಮೈಸೂರು ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಲಷ್ಕರ್ ಠಾಣೆ ಪೊಲೀಸರು ಯುವಕನ ಫೋಟೊವನ್ನು ತರಿಸಿಕೊಂಡು ಈತನ ಮೊಬೈಲ್ ಲೊಕೇಶನ್ ಆಧರಿಸಿ ಶೋಧ ಕೈಗೊಂಡಾಗ ಮಂಡ್ಯದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿ ಇರುವುದನ್ನು ಪತ್ತೆಹಚ್ಚಿ ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಿದರು.

ಈ ವೇಳೆ ತನ್ನ ತಪ್ಪನ್ನು ಒಪ್ಪಿಕೊಂಡ ಯುವಕ. ನನಗೆ ಹಣದ ಅವಶ್ಯಕತೆ ಇತ್ತು. ಹಾಗಾಗಿ ನಾಟಕವಾಡಿದ್ದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ.
ತದನಂತರ ಪೊಲೀಸರು ಯುವಕನ ಫೋಷಕರನ್ನು ಕರೆಸಿ ಇವನಿಗೆ ಬುದ್ದಿವಾದ ಹೇಳಿ ಮನೆಗೆ ಕಳುಹಿಸಿಕೊಟ್ಟಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ