ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಅ. 16- ಕೊರೊನಾ ಭೀತಿ ನಡುವೆ ನಾಡ ಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.
ನಾಳೆ ಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ 7-45ರಿಂದ 8-15 ರೊಳಗಿನ ಶುಭ ಮುಹೂರ್ತದಲ್ಲಿ ನಾಡ ಅದೇವತೆ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತವಾಗಿ ದಸರಾ ಮಹೋತ್ಸವ ಉದ್ಘಾಟನೆ ನೆರವೇರಿಸಲಾಗುತ್ತದೆ.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ಈ ಬಾರಿಯ ಸರಳ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ 5 ಮಂದಿ ಕೊರೊನಾ ವಾರಿಯರ್ಸ್ ಗಳನ್ನು ಸನ್ಮಾನಿಸಲಾಗುತ್ತದೆ.

ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿಎಂ ಬಿ.ಎಸ್ ಯಡಿಯೂರಪ್ಪ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಹಾಗೂ ಮೈಸೂರು ಭಾಗದ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಈ ಬಾರಿ ಮೈಸೂರು ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಿರುವುದರಿಂದ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶನ್ನು ನಿರ್ಬಂಸಲಾಗಿದೆ. ಕೋವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇವಲ 200 ಮಂದಿ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ ಮೈಸೂರಿನ ಪ್ರಮುಖ ರಸ್ತೆಗಳು ಸೇರಿದಂತೆ 50 ಕಿ.ಮೀ. ವ್ಯಾಪ್ತಿಯಲ್ಲಿ ಬಣ್ಣ ಬಣ್ಣದ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಪ್ರತಿ ವರ್ಷ 100ಕಿ.ಮೀ. ವ್ಯಾಪ್ತಿಯಲ್ಲಿ ದೀಪಗಳು ಕಂಗೊಳಿಸುತ್ತಿದ್ದವು.

ಚಾಮುಂಡಿ ಬೆಟ್ಟದಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಲಾಗಿದೆ. ಎಂದಿನಂತೆ ವಿದ್ಯುತ್ ದೀಪಗಳುಳ್ಳ ಸ್ವಾಗತ ಕಮಾನು ಫಲಕವನ್ನು ಅಳವಡಿಸಲಾಗಿದೆ. ಬೆಟ್ಟದಲ್ಲಿ ದಸರಾ ಉದ್ಘಾಟನೆಗಾಗಿ ವಿಶೇಷ ವೇದಿಕೆ ಸಿದ್ಧಗೊಂಡಿದೆ.

ಇತ್ತ ಅರಮನೆಯಲ್ಲೂ ವಿಶೇಷ ದೀಪಾಲಂಕಾರ ಮಾಡಲಾಗಿದೆ. ಪ್ರತಿ ದಿನ ನಡೆಯುವ ವರ್ಚುವಲ್ ಸಾಂಸ್ಕøತಿಕ ಕಾರ್ಯಕ್ರಮಕ್ಕಾಗಿ ವೇದಿಕೆ ಸಿದ್ದಪಡಿಸಲಾಗಿದೆ.

ಆದರೆ, ಕೊರೊನಾ ಭೀತಿ ಇರುವುದರಿಂದ ಸಾರ್ವಜನಿಕರಿಗೆ ಪ್ರವೇಶ ನಿರಾಕರಿಸಲಾಗಿದೆ. ಹಿಂದೆ ದಸರಾ ವೇಳೆ ಗಿಜಿಗುಡುತ್ತಿದ್ದ ಸಾಂಸ್ಕøತಿಕ ನಗರಿ ಈ ಬಾರಿ ಬಣಗುಡುತ್ತಿದೆ.

Facebook Comments

Sri Raghav

Admin