ಡಾ.ನಾಗೇಂದ್ರ ಕುಟುಂಬಕ್ಕೆ 50 ಲಕ್ಷ ಪರಿಹಾರ, ಉದ್ಯೋಗ : ಸಿಎಂ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.21- ನಿನ್ನೆ ಆತ್ಮಹತ್ಯೆಗೆ ಶರಣಾದ ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಹಾಗೂ ಅನುಕಂಪದ ಆಧಾರದ ಮೇಲೆ ಅವರ ಕುಟುಂಬದವರಿಗೆ ಸರ್ಕಾರದಿಂದ ಉದ್ಯೋಗ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದರು.

ಮೈಸೂರಿಗೆ ತೆರಳುವ ಮುನ್ನ ಕಾವೇರಿ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಪ್ರಕರಣದಲ್ಲಿ ಸಾಮಾನ್ಯವಾಗಿ 30 ಲಕ್ಷ ಪರಿಹಾರ ನೀಡುತ್ತೇವೆ. ಆದರೆ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ 50 ಲಕ್ಷ ಪರಿಹಾರ ನೀಡಲು ಆದೇಶಿಸಿದ್ದೇನೆ.

ಮೇಲಾಕಾರಿಗಳ ಕಿರುಕುಳ ಹಾಗೂ ಕೆಲಸದ ಒತ್ತಡದ ಹಿನ್ನೆಲೆಯಲ್ಲಿ ಡಾ.ನಾಗೇಂದ್ರ ಅವರು ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಿ ಏಳು ದಿನಗಳೊಳಗೆ ವರದಿ ನೀಡಲು ಸೂಚಿಸಿದ್ದೇನೆ ಎಂದು ಹೇಳಿದರು.

5ನೇ ಬಾರಿ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ ಭಾಗ್ಯ ದೊರೆತಿದೆ. ಬಹಳ ದಿನಗಳ ನಂತರ ಪ್ರವಾಸ ಮಾಡುತ್ತಿದ್ದೇನೆ ಎಂದು ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದರು.

ಡಿಜೆಹಳ್ಳಿ, ಕೆಜಿಹಳ್ಳಿಯಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಮಾಡಿರುವ ಆರೋಪ ಸಂಬಂಧ ಸುದ್ದಿಗಾರರ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಯಡಿಯೂರಪ್ಪ, ಈ ಪ್ರಕರಣ ಸಂಬಂಧ ಅಪರಾಧಗಳು ಹೇಗೆ ನಡೆದಿವೆ ಎಂಬುದು ಹೊರಬರುತ್ತದೆ.

ಯಾರು ಈ ಚಟುವಟಿಕೆಗಳಲ್ಲಿ ಬೇರೆ ಬೇರೆ ರೂಪದಲ್ಲಿ ಭಾಗವಹಿಸಿದ್ದಾರೆ ಎಂಬು ಗೊತ್ತಾಗುತ್ತಿದೆ. ಯಾರು ರಾಜಕೀಯ ಮಾಡಿದ್ದಾರೆ ಎಂಬ ಸತ್ಯಸಂಗತಿಗಳು ಸದ್ಯದಲ್ಲೇ ಗೊತ್ತಾಗುತ್ತದೆ ಎಂದು ಹೇಳಿದರು.

ಇಂದಿನಿಂದಲೇ ನಾನು ಜಿಲ್ಲಾ ಪ್ರವಾಸ ಕೈಗೊಳ್ಳುತ್ತೇನೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಮುಖ್ಯಮಂತ್ರಿಗಳು ಉತ್ತರ ನೀಡಿದರು.

Facebook Comments

Sri Raghav

Admin